ADVERTISEMENT

ದೆಹಲಿ ಪ್ರವಾಹ: ಪರಿಸ್ಥಿತಿ ಕುರಿತು ಲೆ. ಗವರ್ನರ್‌ ಜೊತೆ ಮಾತುಕತೆ ನಡೆಸಿದ ಮೋದಿ

ಪಿಟಿಐ
Published 16 ಜುಲೈ 2023, 2:44 IST
Last Updated 16 ಜುಲೈ 2023, 2:44 IST
ಪ್ರಧಾನಿ ನರೇಂದ್ರ ಮೋದಿ ಮತ್ತು ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ ಸಕ್ಸೇನಾ
ಪ್ರಧಾನಿ ನರೇಂದ್ರ ಮೋದಿ ಮತ್ತು ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ ಸಕ್ಸೇನಾ   

ನವದೆಹಲಿ: ವಿದೇಶ ಪ್ರವಾಸ ಮುಗಿಸಿ ದೆಹಲಿಗೆ ಮರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಯಮುನಾ ನದಿ ನೀರಿನಿಂದಾಗಿ ನಗರದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಆಗಿರುವ ಪ್ರಗತಿ ಕುರಿತು ಶನಿವಾರ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ ಸಕ್ಸೇನಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಭಾರಿ ಮಳೆಯಿಂದಾಗಿ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿದು, ದೆಹಲಿಯ ಕೆಲವು ಭಾಗಗಳು ಜಲಾವೃತಗೊಂಡಿದ್ದವು.

ಶನಿವಾರ ಬೆಳಿಗ್ಗೆ ನದಿಯ ನೀರಿನ ಮಟ್ಟವು ಇಳಿಮುಖಗೊಂಡಿದ್ದು, ಜಲಾವೃತಗೊಂಡಿದ್ದ ರಸ್ತೆಗಳನ್ನು ತೆರವುಗೊಳಿಸುವ ಮೂಲಕ ಅಧಿಕಾರಿಗಳು ಸುಲಭ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದರು. ಆದರೆ ಶನಿವಾರ ರಾತ್ರಿ ವೇಳೆ ದೆಹಲಿದಲ್ಲಿ ಮತ್ತೆ ಭಾರಿ ಮಳೆಯಾಗಿದೆ ಎಂದು ವರದಿಯಾಗಿದೆ.

ADVERTISEMENT

ಮೋದಿ ಮೂರು ದಿನಗಳ ಫ್ರಾನ್ಸ್‌ ಮತ್ತು ಯುಎಇ ಪ್ರವಾಸದಲ್ಲಿದ್ದರು. ಪ್ರವಾಸ ಮುಗಿಸಿ ಶನಿವಾರ ದೆಹಲಿಗೆ ಆಗಮಿಸಿದ ತಕ್ಷಣ, ಯಮುನಾ ನದಿಯಿಂದಾಗಿ ದೆಹಲಿಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಮತ್ತು ಆ ಸಂದರ್ಭದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಲೆಫ್ಟಿನೆಂಟ್‌ ಗವರ್ನರ್‌ ಅವರೊಂದಿಗೆ ಮಾತನಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.