
ಭಾರತದ ಪ್ರಧಾನಿ ನರೇಂದ್ರ ಮೋದಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್
(ಪಿಟಿಐ ಚಿತ್ರ)
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆ ಗುರುವಾರ ದೂರವಾಣಿ ಸಂಭಾಷಣೆ ನಡೆಸಿದರು.
ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಎರಡೂ ದೇಶಗಳು ಮಾತುಕತೆಯಲ್ಲಿ ನಿರತವಾಗಿರುವ ಸಮಯದಲ್ಲೇ ಈ ಬೆಳವಣಿಗೆ ನಡೆದಿದೆ.
ವ್ಯಾಪಾರ, ತಂತ್ರಜ್ಞಾನ, ಇಂಧನ, ರಕ್ಷಣೆ ಮತ್ತು ಭದ್ರತಾ ಕ್ಷೇತ್ರದಲ್ಲಿನ ಸಹಕಾರವನ್ನು ವಿಸ್ತರಿಸುವ ಕುರಿತು ಉಭಯ ನಾಯಕರು ಅಭಿಪ್ರಾಯ ವಿನಿಮಯ ಮಾಡಿಕೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತ- ಅಮೆರಿಕ ನಡುವಿನ ಸಮಗ್ರ ಜಾಗತಿಕ ಕಾರ್ಯತಂತ್ರ ಪಾಲುದಾರಿಕೆಯಲ್ಲಿನ ಪ್ರಗತಿಯ ಬಗ್ಗೆ ಇಬ್ಬರೂ ಚರ್ಚಿಸಿದರು. ಉಭಯ ದೇಶಗಳ ನಡುವೆ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವು ಸ್ಥಿರವಾಗಿ ಬಲಗೊಳ್ಳುತ್ತಿರುವುದಕ್ಕೆ ತೃಪ್ತಿ ವ್ಯಕ್ತಪಡಿಸಿದರು ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.