ADVERTISEMENT

ನಿವಾರ್: ಮೃತರಿಗೆ ₹ 2 ಲಕ್ಷ, ಗಾಯಾಳುಗಳಿಗೆ ₹ 50,000 ಪರಿಹಾರ ಘೋಷಿಸಿದ ಕೇಂದ್ರ

ತಮಿಳುನಾಡು ಮುಖ್ಯಮಂತ್ರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ

ಏಜೆನ್ಸೀಸ್
Published 28 ನವೆಂಬರ್ 2020, 4:33 IST
Last Updated 28 ನವೆಂಬರ್ 2020, 4:33 IST
ಪ್ರಧಾನಿ ನರೇಂದ್ರ ಮೋದಿ - ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ
ಪ್ರಧಾನಿ ನರೇಂದ್ರ ಮೋದಿ - ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ   

ನವದೆಹಲಿ: ನಿವಾರ್‌ ಚಂಡಮಾರುತದ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.ಮೃತರ ಕುಟುಂಬದವರಿಗೆ ₹ 2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹ 50,000 ಪರಿಹಾರ ಘೋಷಿಸಿದ್ದಾರೆ.

'ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗೆ ಸಹಾಯ ಮಾಡಲು ಕೇಂದ್ರ ತಂಡಗಳನ್ನು ತಮಿಳುನಾಡಿಗೆ ಕಳುಹಿಸಲಾಗುತ್ತಿದೆ' ಎಂದು ಪ್ರಧಾನಿ ಕಚೇರಿ (ಪಿಎಂಒ) ಟ್ವೀಟ್ ಮಾಡಿದೆ.

ಚಂಡಮಾರುತದಿಂದ ಮೃತಪಟ್ಟವರ ಬಗ್ಗೆ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸಿದರು. 'ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹ 50,000 ಪರಿಹಾರವನ್ನು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಲಾಗುವುದು' ಎಂದು ಪಿಎಂಒ ತಿಳಿಸಿದೆ.

ADVERTISEMENT

ತಮಿಳುನಾಡಿನ ಕಡಲೂರು ಜಿಲ್ಲೆಯಹಾನಿಪ್ರದೇಶಗಳಿಗೆ ತಮಿಳುನಾಡು ಮುಖ್ಯಮಂತ್ರಿ ಗುರುವಾರ ಭೇಟಿ ನೀಡಿದ್ದರು ಮತ್ತು ನಿವಾರ್ ಚಂಡಮಾರುತದಿಂದ ಉಂಟಾದ ಒಟ್ಟು ಹಾನಿಯ ಅಂದಾಜು ಮಾಡಿದ ನಂತರ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.