ADVERTISEMENT

ಇಸ್ರೇಲ್‌ ಯುದ್ಧದ ಸ್ಥಿತಿಯ ಬಗ್ಗೆ ಪ್ರಧಾನಿ ಮೋದಿ ಅವರೊಂದಿಗೆ ನೆತನ್ಯಾಹು ಚರ್ಚೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಡಿಸೆಂಬರ್ 2023, 16:13 IST
Last Updated 19 ಡಿಸೆಂಬರ್ 2023, 16:13 IST
<div class="paragraphs"><p>ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಇಸ್ರೇಲ್‌ ಪ್ರಧಾನಿ&nbsp;ಬೆಂಜಮಿನ್&nbsp;ನೆತನ್ಯಾಹು</p></div>

ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು

   

ನವದೆಹಲಿ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರು ಪ್ರಸ್ತುತ ನಡೆಯುತ್ತಿರುವ ಇಸ್ರೇಲ್‌–ಹಮಾಸ್‌ ಯುದ್ಧದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಕರೆ ಮೂಲಕ ಮಾತನಾಡಿದ್ದಾರೆ.

ಯುದ್ಧದಲ್ಲಾಗುತ್ತಿರುವ ಇತ್ತೀಚಿನ ಬೆಳವಣಿಗೆಗೆಳ ಬಗ್ಗೆ ನೆತನ್ಯಾಹು ಅವರು ಮೋದಿ ಅವರಿಗೆ ವಿವರಿಸಿದ್ದಾರೆ.

ADVERTISEMENT

ಇಸ್ರೇಲ್-ಹಮಾಸ್ ಸಂಘರ್ಷದ ಬಗ್ಗೆ, ಕಡಲ ಸಂಚಾರದ ಸುರಕ್ಷತೆಯ ಬಗ್ಗೆ ಇರುವ ಕಳವಳ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ.

ಯುದ್ಧ ಸಂತ್ರಸ್ತರಿಗಾಗಿ ನಿರಂತರ ಮಾನವೀಯ ನೆರವಿನೊಂದಿಗೆ, ಶಾಂತಿ ಮತ್ತು ಸ್ಥಿರತೆಯ ಮರುಸ್ಥಾಪನೆಯ ಪರವಾಗಿ ಭಾರತ ಸ್ಥಿರ ನಿಲುವನ್ನು ಹೊಂದಿದೆ ಎಂದು ನೆತನ್ಯಾಹು ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ್ದಾರೆ. 

ಈ ಕುರಿತು ಮೋದಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.