
ಪಿಟಿಐ
ನವದೆಹಲಿ: ಬಹರೇನ್‌ನ ರಾಜ ಹಮದ್ ಬಿನ್ ಅಲ್ ಖಲೀಫಾ ಹಾಗೂ ಸೌದಿ ಅರೇಬಿಯಾದ ರಾಜ ಹಾಗೂ ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ದೂರವಾಣಿಯ ಮೂಲಕ ಮಾತುಕತೆ ನಡೆಸಿದರು.
‘ಇತ್ತೀಚಿಗೆ ಎರಡು ರಾಷ್ಟ್ರಗಳ ಮೇಲಿನ ದಾಳಿಯನ್ನು ಬಲವಾಗಿ ಖಂಡಿಸಿದ್ದು, ಉಭಯ ದೇಶಗಳ ಸಾರ್ವಭೌಮತೆ ಹಾಗೂ ಪ್ರಾದೇಶಿಕ ಸಮಗ್ರತೆಯ ಉಲ್ಲಂಘನೆ’ ಎಂದು ತಿಳಿಸಿದ್ದಾರೆ.
ಆದಷ್ಟು ಶೀಘ್ರ ಪ್ರಾದೇಶಿಕ ಶಾಂತಿ ಹಾಗೂ ಸ್ಥಿರತೆ ಕಾಪಾಡುವುದು ಮೊದಲ ಆದ್ಯತೆಯಾಗಿ ಪರಿಗಣಿಸುವಂತೆ ಉಭಯ ನಾಯಕರಿಗೆ ತಿಳಿಸಿದ ಅವರು, ಸಂಕಷ್ಟದ ಸಂದರ್ಭದಲ್ಲಿ ಅಲ್ಲಿ ನೆಲಸಿರುವ ಭಾರತೀಯರ ಬಗ್ಗೆ ಕಾಳಜಿ ವಹಿಸಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.