
ಪ್ರಧಾನಿ ನರೇಂದ್ರ ಮೋದಿ ಹಾಗೂ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು
–ಪಿಟಿಐ ಚಿತ್ರ
ನವದೆಹಲಿ: ಪಶ್ಚಿಮ ಎಷ್ಯಾದಲ್ಲಿ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರ ಜೊತೆ ಚರ್ಚಿಸಿದ್ದಾರೆ.
ಉಭಯ ನಾಯಕರ ನಡುವೆ ದೂರವಾಣಿಯಲ್ಲಿ ಮಾತುಕತೆ ನಡೆದಿದೆ. ಈ ವಿಷಯನ್ನು ಪ್ರಧಾನಿ ಮೋದಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.
‘ಪ್ರಾದೇಶಿಕ ಪರಿಸ್ಥಿತಿಯ ಕುರಿತು ಚರ್ಚಿಸಲು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಲಾಯಿತು’ ಎಂದು ಮೋದಿ ಬರೆದುಕೊಂಡಿದ್ದಾರೆ.
‘ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಭಾರತದ ಕಳವಳವನ್ನು ಪ್ರಧಾನಿ ಮೋದಿ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಾಗರಿಕರ ಸುರಕ್ಷತೆಗೆ ಆದ್ಯತೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಆದಷ್ಟು ಬೇಗ ಸಂಘರ್ಷ ನಿಲ್ಲಿಸಬೇಕು ಎಂದೂ ಮೋದಿ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.