ADVERTISEMENT

ವಿದ್ಯಾರ್ಥಿಗಳೊಂದಿಗೆ ನಾಳೆ ಪ್ರಧಾನಿ ಮೋದಿ ಸಂವಾದ

ನಾಳೆ ಸ್ಮಾರ್ಟ್‌ ಇಂಡಿಯಾ ಹ್ಯಾಕಥಾನ್‌ ಸ್ಪರ್ಧೆ ಅಂತಿಮ ಸುತ್ತು

ಪಿಟಿಐ
Published 31 ಜುಲೈ 2020, 9:53 IST
Last Updated 31 ಜುಲೈ 2020, 9:53 IST
ಮಣಿಪಾಲದಲ್ಲಿ ನಡೆದ ಸ್ಮಾರ್ಟ್‌ ಇಂಡಿಯಾ ಹ್ಯಾಕಥಾನ್‌ನ ದೃಶ್ಯ (ಸಂಗ್ರಹ ಚಿತ್ರ)
ಮಣಿಪಾಲದಲ್ಲಿ ನಡೆದ ಸ್ಮಾರ್ಟ್‌ ಇಂಡಿಯಾ ಹ್ಯಾಕಥಾನ್‌ನ ದೃಶ್ಯ (ಸಂಗ್ರಹ ಚಿತ್ರ)   

ನವದೆಹಲಿ: ‘ಸ್ಮಾರ್ಟ್‌ ಇಂಡಿಯಾ ಹ್ಯಾಕಥಾನ್‌’ ಸ್ಪರ್ಧೆಯ ಅಂತಿಮ ಸುತ್ತು ಶನಿವಾರ (ಆಗಸ್ಟ್‌ 1) ನಡೆಯಲಿದ್ದು, ಅಂದು ವಿಡಿಯೊ ಕಾನ್ಫರೆನ್ಸ್‌ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು.

ಸಂವಾದ ಕಾರ್ಯಕ್ರಮ ವಿಡಿಯೊ ಕಾನ್ಫರೆನ್ಸ್‌ ಮೂಲಕ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಜನರು ನಿತ್ಯ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸಬಲ್ಲ ತಂತ್ರಜ್ಞಾನದ ಆವಿಷ್ಕಾರ, ಆ್ಯಪ್‌ಗಳನ್ನು ಅಭಿವೃದ್ಧಿಪಡಿಸಲು ‘ಸ್ಮಾರ್ಟ್‌ ಇಂಡಿಯಾ ಹ್ಯಾಕಥಾನ್‌’ ಹೆಸರಿನಲ್ಲಿ ರಾಷ್ಟ್ರ ಮಟ್ಟದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ADVERTISEMENT

2017ರಲ್ಲಿ ಆಯೋಜಿಸಿದ್ದ ಸ್ಪರ್ಧೆಯ ಮೊದಲ ಆವೃತ್ತಿಯಲ್ಲಿ 42,000 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 2018ರಲ್ಲಿ ಒಂದು ಲಕ್ಷ ಹಾಗೂ 2019ರಲ್ಲಿ ಎರಡು ಲಕ್ಷ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಿದ್ದರು. 2020ರ ಸ್ಪರ್ಧೆಯ ಮೊದಲ ಸುತ್ತಿನಲ್ಲಿ 4.5 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.