ADVERTISEMENT

ಬುಡಕಟ್ಟು ರ‍್ಯಾಲಿ ಉದ್ದೇಶಿಸಿ ಮೋದಿ ಭಾಷಣ

ಪಿಟಿಐ
Published 14 ನವೆಂಬರ್ 2021, 14:06 IST
Last Updated 14 ನವೆಂಬರ್ 2021, 14:06 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ಭೋಪಾಲ್: ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಬುಡಕಟ್ಟು ಜನಾಂಗದವರ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುವರು. ಅಲ್ಲದೆ ರಾಣಿ ಕಮಲಾಪತಿ ರೈಲು ನಿಲ್ದಾಣವನ್ನು ಉದ್ಘಾಟಿಸುವರು.

ಬುಡಕಟ್ಟು ಜನರ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮದಿನ ನಿಮಿತ್ತ ನವೆಂಬರ್‌ 15 ರಂದು ‘ಜನ್‌ಜಾತೀಯ ಗೌರವ್ ದಿವಸ್’ ಎಂದು ಆಚರಿಸಲಾಗುವುದು ಎಂದು ಬಿಜೆಪಿ ಇತ್ತೀಚೆಗಷ್ಟೇ ಘೋಷಿಸಿತ್ತು.

ಹಬೀಬ್‌ಗಂಜ್ ರೈಲು ನಿಲ್ದಾಣದ ಹೆಸರನ್ನು ಬದಲಾಯಿಸಿ, ಇದೀಗ ರಾಣಿ ಕಮಲಾಪತಿ ಅವರ ಹೆಸರನ್ನು ಮರುನಾಮಕರಣ ಮಾಡಲಾಗಿದೆ. ಈ ರೈಲು ನಿಲ್ದಾಣವನ್ನು ಮೋದಿಯವರು ಉದ್ಘಾಟಿಸಲಿದ್ದಾರೆ.

ADVERTISEMENT

ಭೋಪಾಲ್‌ನ ಬಿಎಚ್‌ಇಎಲ್‌ ಜಾಂಬೋರಿ ಮೈದಾನದಲ್ಲಿ ಮಧ್ಯಾಹ್ನ 1ಗಂಟೆ ಸುಮಾರಿಗೆ ಬುಡಕಟ್ಟು ರ‍್ಯಾಲಿ ಉದ್ದೇಶಿಸಿ ಮಾತನಾಡುವ ಮೋದಿ ಅವರು, ‌ಈ ಸಂದರ್ಭದಲ್ಲಿ ಬುಡಕಟ್ಟು ಸಮುದಾಯಗಳ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್‌) ಅಡಿಯಲ್ಲಿ ಬುಡಕಟ್ಟು ಫಲಾನುಭವಿಗಳಿಗೆ ಮಾಸಿಕ ಪಡಿತರವನ್ನು ಮನೆ ಬಾಗಿಲಿಗೆ ತಲುಪಿಸುವ ಗುರಿಯನ್ನು ಹೊಂದಿರುವ ‘ರೇಷನ್ ಆಪ್ಕೆ ಗ್ರಾಮ್’ ಯೋಜನೆಯನ್ನು ಮಧ್ಯಪ್ರದೇಶದಲ್ಲಿ ಪ್ರಧಾನ ಮಂತ್ರಿಗಳು ಪ್ರಾರಂಭಿಸಲಿದ್ದಾರೆ. ಇದರಿಂದ ಬುಡಕಟ್ಟು ನಿವಾಸಿಗಳು ನ್ಯಾಯಬೆಲೆ ಅಂಗಡಿಗೆ ಅಲೆದಾಡುವುದು ತಪ್ಪುತ್ತದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.