ADVERTISEMENT

ಆ.1ರಂದು ಪ್ರಧಾನಿ ಮೋದಿಗೆ ‘ಲೋಕಮಾನ್ಯ ತಿಲಕ್‌’ ಪ್ರಶಸ್ತಿ ಪ್ರದಾನ

ಪಿಟಿಐ
Published 10 ಜುಲೈ 2023, 15:37 IST
Last Updated 10 ಜುಲೈ 2023, 15:37 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ಪುಣೆ: ನಾಗರಿಕರಲ್ಲಿ ದೇಶಭಕ್ತಿಯ ಭಾವನೆಯನ್ನು ಜಾಗೃತಗೊಳಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಗಸ್ಟ್‌ 1ರಂದು ‘ಲೋಕಮಾನ್ಯ ತಿಲಕ್‌’ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಲಕ್‌ ಸ್ಮಾರಕ ಮಂದಿರ ಟ್ರಸ್ಟ್‌ (ಹಿಂದ್‌ ಸ್ವರಾಜ್‌ ಸಂಘ್‌) ಸೋಮವಾರ ಹೇಳಿದೆ.

ಲೋಕಮಾನ್ಯ ತಿಲಕ್‌ ಅವರ 103ನೇ ಪುಣ್ಯತಿಥಿಯಂದು ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ದೀಪಕ್‌ ತಿಲಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೋದಿ ಅವರ ಸರ್ವೋಚ್ಚ ನಾಯಕತ್ವ ಮತ್ತು ಆತ್ಮನಿರ್ಭರ ಭಾರತ ಪರಿಕಲ್ಪನೆಯಲ್ಲಿ ದೇಶವು ಅಭಿವೃದ್ಧಿಯ ಮೆಟ್ಟಿಲುಗಳನ್ನು ಏರುತ್ತಿದೆ ಎಂದಿದ್ದಾರೆ.

ADVERTISEMENT

ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದೇವೆ ಎಂದೂ ಹೇಳಿದ್ದಾರೆ.

ಮಹಾರಾಷ್ಟ್ರ ರಾಜ್ಯಪಾಲ ರಮೇಶ್‌ ಬೈಸ್‌, ಮುಖ್ಯಮಂತ್ರಿ ಏಕನಾಥ ಶಿಂದೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡಣವೀಸ್‌ ಮತ್ತು ಅಜಿತ್‌ ಪವಾರ್‌ ಅವರನ್ನೂ ಆಹ್ವಾನಿಸಲಾಗಿದೆ ಎಂದು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.