ADVERTISEMENT

'ಆಪರೇಷನ್‌ ಸಿಂಧೂರ' ನಂತರ ಮೊದಲ ಕೇಂದ್ರ ಮಂತ್ರಿ ಪರಿಷತ್‌ ಸಭೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2025, 16:05 IST
Last Updated 2 ಜೂನ್ 2025, 16:05 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ವಿರುದ್ಧ ನಡೆಸಿದ ‘ಆಪರೇಷನ್‌ ಸಿಂಧೂರ’ದ ನಂತರ ಮೊದಲ ಕೇಂದ್ರ ಮಂತ್ರಿ ಪರಿಷತ್‌ ಸಭೆಯು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಜೂನ್‌ 4ರಂದು ನಡೆಯಲಿದೆ.

ಪಾಕಿಸ್ತಾನದೊಳಗೆ ರಕ್ಷಣಾ ಪಡೆಗಳು ನಡೆಸಿದ ದಾಳಿಯ ವಿವರಗಳನ್ನು ಸಭೆಗೆ ವಿವರಿಸುವ ನಿರೀಕ್ಷೆ ಇದೆ. ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ವರ್ಷ ಪೂರ್ಣಗೊಳ್ಳುತ್ತಿರುವ ಪ್ರಯುಕ್ತ ಈ ಸಭೆಯನ್ನು ಆಯೋಜಿಸಲಾಗಿದೆ.

ಮೇ 8ರಂದು ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ 9 ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.