ADVERTISEMENT

ವಿಶ್ವದ ಅತಿ ಉದ್ದದ ‘ಗಂಗಾ ವಿಲಾಸ್’ ಹಡಗು ಸೇವೆಗೆ ಜ.13ರಂದು ಚಾಲನೆ

ಪಿಟಿಐ
Published 8 ಜನವರಿ 2023, 9:41 IST
Last Updated 8 ಜನವರಿ 2023, 9:41 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ವಿಶ್ವದಲ್ಲೇ ಅತಿ ಉದ್ದದ ನದಿ ವಿಹಾರ ಒದಗಿಸಲಿರುವ ‘ಎಂವಿ ಗಂಗಾ ವಿಲಾಸ್’ಹಡಗಿಗೆ ವಾರಾಣಸಿಯಿಂದ ಪ್ರಧಾನಿ ನರೇಂದ್ರ ಮೋದಿ ಜ.13ರಂದು ಚಾಲನೆ ನೀಡಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಐಷಾರಾಮಿ ಹಡಗು ಭಾರತ ಮತ್ತು ಬಾಂಗ್ಲಾದೇಶದ 5 ರಾಜ್ಯಗಳಲ್ಲಿ 27 ನದಿಗಳಲ್ಲಿ 3,200 ಕಿಲೋಮೀಟರ್‌ಗಿಂತಲೂ ಹೆಚ್ಚು ದೂರವನ್ನು ಕ್ರಮಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಎಂವಿ ಗಂಗಾ ವಿಲಾಸ್ ವಿಶ್ವದ ನದಿ ವಿಹಾರ ನಕ್ಷೆಯಲ್ಲಿ ಭಾರತಕ್ಕೆ ಜಾಗ ನೀಡುತ್ತದೆ ಎಂದು ಕೇಂದ್ರ ಬಂದರು, ಹಡಗು ಮತ್ತು ಜಲಸಾರಿಗೆ ಸಚಿವ ಸರ್ಬಾನಂದ ಸೋನೊವಾಲ್ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.