ADVERTISEMENT

ಮಾ.21ರಂದು ಆಸ್ಟ್ರೇಲಿಯಾದ ಪ್ರಧಾನಿ ಮಾರಿಸನ್ ಜತೆಗೆ ಮೋದಿ ವರ್ಚುಯಲ್‌ ಸಭೆ 

ಪಿಟಿಐ
Published 17 ಮಾರ್ಚ್ 2022, 12:53 IST
Last Updated 17 ಮಾರ್ಚ್ 2022, 12:53 IST
ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌ –ಪಿಟಿಐ ಚಿತ್ರ
ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌ –ಪಿಟಿಐ ಚಿತ್ರ   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌ ಅವರೊಂದಿಗೆ ಇದೇ ಮಾ. 21ರಂದು ಆನ್‌ಲೈನ್‌ ಶೃಂಗಸಭೆ ನಡೆಸಲಿದ್ದಾರೆ.

ಇದೇ ವೇಳೆ ಉಭಯ ನಾಯಕರು ದ್ವಿಪಕ್ಷೀಯ ಸಂಬಂಧ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಹಲವು ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆ ಇದೆ ಎಂದು ವಿದೇಶಾಂಗ ಇಲಾಖೆ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.

ಮೋದಿ ಅವರು 2020ರ ಜೂ.4ರಂದು ಮಾರಿಸನ್‌ ಅವರೊಂದಿಗೆ ಮೊದಲ ಬಾರಿಗೆ ಆನ್‌ಲೈನ್‌ ಶೃಂಗಸಭೆ ನಡೆಸಿದ್ದರು.

ಸಭೆಯಲ್ಲಿ ಭದ್ರತಾ ಪಡೆಗಳಿಗೆ ಶಸ್ತ್ರಾಸ್ತ್ರ, ಯುದ್ಧಸಾಮಗ್ರಿಗಳ ಸಾಗಣೆ, ಸೇನಾ ನೆಲೆಗಳ ಬಳಕೆ ಸೇರಿದಂತೆ ರಕ್ಷಣಾ ಕ್ಷೇತ್ರದಲ್ಲಿ ಪರಸ್ಪರ ಸಹಕಾರ ಸಾಧಿಸುವ ಮಹತ್ವದ ಒಪ್ಪಂದಕ್ಕೆ ಉಭಯ ರಾಷ್ಟ್ರಗಳ ನಾಯಕರು ಸಹಿ ಹಾಕಿದ್ದರು.

ಸೈಬರ್‌ ಹಾಗೂ ಸೈಬರ್‌ ಆಧಾರಿತ ತಂತ್ರಜ್ಞಾನ, ಗಣಿಗಾರಿಕೆ, ಮಿಲಿಟರಿ ತಂತ್ರಜ್ಞಾನ, ವೃತ್ತಿಪರ ಶಿಕ್ಷಣ ಹಾಗೂ ಜಲಸಂಪನ್ಮೂಲ ನಿರ್ವಹಣೆ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ದ್ವಿಪಕ್ಷೀಯ ಸಹಕಾರ ಈ ಒಪ್ಪಂದದಿಂದ ಮತ್ತಷ್ಟು ಗಟ್ಟಿಯಾಗಲಿದೆ ಎಂದು ಉಭಯ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದರು.

ಕಳೆದ ಕೆಲವು ವರ್ಷಗಳಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾಂಧವ್ಯ ಉತ್ತಮ ರೀತಿಯಲ್ಲಿ ಸಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.