ನವದೆಹಲಿ(ಪಿಟಿಐ): ಕೇರಳ ಮೂಲದ ಮಲಯಾಳಂ ಪತ್ರಿಕೆ 'ಮಾತೃಭೂಮಿ'ಯ ಶತಮಾನೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.
1923ರ ಮಾರ್ಚ್ 18ರಂದು ಆರಂಭವಾದ ಈ ಪತ್ರಿಕೆಯು ಸಾಮಾಜಿಕ ಸುಧಾರಣೆ ಮತ್ತು ಅಭಿವೃದ್ಧಿ ಪರವಾದ ಕಾರ್ಯಸೂಚಿಯನ್ನು ಬೆಂಬಲಿಸುತ್ತಿದೆ. ಅಲ್ಲದೆ ರಾಷ್ಟ್ರೀಯ ಹಿತಾಸಕ್ತಿಯಂತಹ ವಿಚಾರಗಳಿಗೆ ಮಹತ್ವ ನೀಡುತ್ತಿದೆ ಎಂದು ಪತ್ರಿಕೆ ಹೇಳಿದೆ. ಸದ್ಯ 15 ಆವೃತ್ತಿಗಳನ್ನು ಹೊಂದಿರುವ ಮಾತೃಭೂಮಿ ಪತ್ರಿಕೆಯು, 11 ನಿಯತಕಾಲಿಕೆಗಳನ್ನು ಪ್ರಕಟಿಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.