ADVERTISEMENT

ಅಟಲ್ ಸುರಂಗ ಮಾರ್ಗಕ್ಕೆ ನಾಳೆ ಪ್ರಧಾನಿ ಮೋದಿ ಚಾಲನೆ

ವಿಶ್ವದ ಅತಿ ದೊಡ್ಡ ಸುರಂಗ ಮಾರ್ಗ, ಮನಾಲಿ–ಲೇಹ್ ಸಂಪರ್ಕಿಸುವ ದಾರಿ

ಪಿಟಿಐ
Published 3 ಅಕ್ಟೋಬರ್ 2020, 3:04 IST
Last Updated 3 ಅಕ್ಟೋಬರ್ 2020, 3:04 IST
ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಉದ್ಘಾಟಿಸಲಿರುವ ಅಟಲ್ ಟನಲ್
ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಉದ್ಘಾಟಿಸಲಿರುವ ಅಟಲ್ ಟನಲ್   

ಶಿಮ್ಲಾ:ಹಿಮಾಚಲ ಪ್ರದೇಶದ ಮನಾಲಿ ಮತ್ತು ಲೇಹ್ ಅನ್ನು ಸಂಪರ್ಕಿಸುವ ಜಗತ್ತಿನ ಅತೀ ಉದ್ದದ ಅಟಲ್ ಸುರಂಗ ಮಾರ್ಗವನ್ನು ಶನಿವಾರ ಪ್ರಧಾನಿ ನರೇಂದ್ರಮೋದಿ ಅವರು ಉದ್ಘಾಟಿಸಲಿದ್ದಾರೆ.

ಹಿಮಾಚಲ ಪ್ರದೇಶದ ರೋಹ್ಟಾಂಗ್‌ನಲ್ಲಿ ನಡೆಯುವ ಸುರಂಗ ಮಾರ್ಗದ ಉದ್ಘಾಟನಾ ಕಾರ್ಯಕ್ರಮದಲ್ಲಿ, ಪ್ರಧಾನಿಯವರೊಂದಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪಾಲ್ಗೊಳ್ಳಲಿದ್ದಾರೆ.

ಈ ಕಾರ್ಯಕ್ರಮದ ನಂತರಲಾಹೌಲ್ ಸ್ಪಿತಿಯ ಸಿಸ್ಸು ಮತ್ತು ಸೋಲಾಂಗ್ ಕಣಿವೆಯಲ್ಲಿ ಸಾರ್ವಜನಿಕ ಸಮಾರಂಭಗಳಲ್ಲಿ ಮೋದಿ ಭಾಗವಹಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಮನಾಲಿಯನ್ನು ಲೇಹ್‌ಗೆ ಸಂಪರ್ಕಿಸುವ9.02 ಕಿ.ಮೀ ಉದ್ದದ ಅಟಲ್ ಸುರಂಗವು ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗವಾಗಿದೆ. ಈ ಮಾರ್ಗ ಮನಾಲಿ–ಲೇಹ್‌ ನಡುವಿನ ದೂರವನ್ನು 46.ಮೀ ನಷ್ಟು ಕಡಿತಗೊಳಿಸುವ ಜತೆಗೆ, ನಾಲ್ಕರಿಂದ ಐದು ಗಂಟೆಗಳವರೆಗೆ ಪ್ರಯಾಣದ ಅವಧಿಯನ್ನು ಕಡಿತಗೊಳಿಸಲಿದೆ.

ಈ ಹಿಂದೆ ವರ್ಷದಲ್ಲಿ ಆರು ತಿಂಗಳು ಈ ಮಾರ್ಗದಲ್ಲಿ ಹಿಮಪಾತವಾಗುತ್ತಿದ್ದರಿಂದ, ಅರ್ಧ ವರ್ಷ ಸಂಚಾರಕ್ಕೆ ನಿರ್ಬಂಧ ಹೇರಲಾಗುತ್ತಿತ್ತು. ಈಗ ಸುರಂಗ ನಿರ್ಮಾಣವಾಗಿರುವುದರಿಂದ,ವರ್ಷಪೂರ್ತಿ ಮನಾಲಿಯಿಂದ ಲಹೌಲ್‌ – ಸ್ಪಿತಿ ಕಣಿವೆಗೆ ಸಂಚರಿಸಬಹುದಾಗಿದೆ.

ಹಿಮಾಲಯದ ಪಿರ್ ಪಂಜಾಲ್ ಶ್ರೇಣಿಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ (ಎಂಎಸ್ಎಲ್) 3,000 ಮೀಟರ್ (10,000 ಅಡಿ) ಎತ್ತರದಲ್ಲಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಈ ಸುರಂಗವನ್ನು ನಿರ್ಮಿಸಲಾಗಿದೆ.

ಈ ಸುರಂಗವನ್ನು ಪೂರ್ಣಗೊಳಿಸಲು ಅಂದಾಜು ಅವಧಿ 6 ವರ್ಷಗಳಿಗಿಂತ ಕಡಿಮೆಯಿತ್ತು. ಆದರೆ ಇದು 10 ವರ್ಷಗಳಲ್ಲಿ ಪೂರ್ಣಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.