ADVERTISEMENT

ಕೋವಿಡ್‌ ಪರಿಸ್ಥಿತಿ: ಈಶಾನ್ಯ ರಾಜ್ಯಗಳ ಸಿ.ಎಂ ಜತೆ ಮಂಗಳವಾರ ಮೋದಿ ಸಂವಾದ

ಪಿಟಿಐ
Published 12 ಜುಲೈ 2021, 12:16 IST
Last Updated 12 ಜುಲೈ 2021, 12:16 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಕೋವಿಡ್‌–19 ಪರಿಸ್ಥಿತಿಯ ಕುರಿತು ಚರ್ಚಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಈಶಾನ್ಯ ಭಾಗದ ಎಂಟು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಅಸ್ಸಾಂ, ನಾಗಾಲ್ಯಾಂಡ್, ತ್ರಿಪುರ, ಸಿಕ್ಕಿಂ, ಮಣಿಪುರ, ಮೇಘಾಲಯ, ಅರುಣಾಚಲ ಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಮೋದಿ ಅವರು ಸಂವಹನ ನಡೆಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ದೇಶದ ಹೆಚ್ಚಿನ ಭಾಗಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಸ್ಥಿರವಾದ ಕುಸಿತ ಕಂಡಿದ್ದರೂ, ಈಶಾನ್ಯ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.