ನರೇಂದ್ರ ಮೋದಿ
–ಪಿಟಿಐ ಚಿತ್ರ
ನವದೆಹಲಿ: ಮುಂದಿನ ವಾರ ಮಲೇಷ್ಯಾದಲ್ಲಿ ನಡೆಯಲಿರುವ ಅಸಿಯಾನ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಆಗಿ ಹಾಜರಾಗಲಿದ್ದಾರೆ.
ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಜೊತೆ ದೂರವಾಣಿ ಸಂಭಾಷಣೆ ನಡೆಸಿದ ಮೋದಿ ಅವರು ಈ ಮಾಹಿತಿ ನೀಡಿದ್ದಾರೆ.
‘ಗೆಳೆಯ ಪ್ರಧಾನಿ ಅನ್ವರ್ ಇಬ್ರಾಹಿಂ ಜೊತೆಗೆ ಆತ್ಮೀಯ ಸಂಭಾಷಣೆ ನಡೆಸಿದೆ. ಮಲೇಷ್ಯಾ ಅಸಿಯಾನ್ ಶೃಂಗಸಭೆಯ ಅಧ್ಯಕ್ಷತೆ ವಹಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿ, ಕಾರ್ಯಕ್ರಮದ ಯಶಸ್ಸಿಗೆ ಶುಭ ಕೋರಿದೆ’ ಎಂದು ಮೋದಿ ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.
ಅಸಿಯಾನ್ ಸಭೆಯು ಅಕ್ಟೋಬರ್ 26ರಿಂದ 28ರವರೆಗೆ ನಡೆಯಲಿದೆ.
ಕಾಂಗ್ರೆಸ್ ಕಿಡಿ: ‘ಅಸಿಯಾನ್ ಶೃಂಗಸಭೆಯಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗುವುದನ್ನು ತಪ್ಪಿಸಿಕೊಳ್ಳಲು ಪ್ರಧಾನಿ ಮೋದಿ ಅವರು ವರ್ಚುವಲ್ ಆಗಿ ಭಾಗಿಯಾಗುತ್ತಿದ್ದಾರೆ’ ಎಂದು ಕಾಂಗ್ರೆಸ್ ಟೀಕಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.