ADVERTISEMENT

ಮಹಾರಾಷ್ಟ್ರ: ₹7,500 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಪಿಟಿಐ
Published 26 ಅಕ್ಟೋಬರ್ 2023, 4:14 IST
Last Updated 26 ಅಕ್ಟೋಬರ್ 2023, 4:14 IST
<div class="paragraphs"><p>ನರೇಂದ್ರ ಮೋದಿ</p></div>

ನರೇಂದ್ರ ಮೋದಿ

   

(ಸಂಗ್ರಹ ಚಿತ್ರ)

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದು, ₹7,500 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ADVERTISEMENT

ಇದು ಆರೋಗ್ಯ, ರೈಲು, ರಸ್ತೆ, ತೈಲ ಮತ್ತು ಅನಿಲ ಕ್ಷೇತ್ರ ಸೇರಿದಂತೆ ಬಹು ಅಭಿವೃದ್ಧಿ ಯೋಜನೆಗಳನ್ನು ಒಳಗೊಂಡಿರಲಿದೆ.

ಬಳಿಕ ಗೋವಾಗೆ ತೆರಳಲಿರುವ ಪ್ರಧಾನಿ ಮೋದಿ, 37ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ.

ಶಿರಡಿ ಸಾಯಿಬಾಬಾ ಮಂದಿರದಲ್ಲಿ ಪೂಜೆ ಸಲ್ಲಿಸುವ ಮೂಲಕ ಪ್ರಧಾನಿ ಅವರ ಪ್ರವಾಸ ಆರಂಭಗೊಳ್ಳಲಿದೆ. ಅಲ್ಲಿ ಅವರು 'ದರ್ಶನ ಕ್ಯೂ' ಕಾಂಪ್ಲೆಕ್ಸ್ ಉದ್ಘಾಟಿಸಲಿದ್ದಾರೆ. ಬಳಿಕ ನೀಲವಾಂಡೆ ಅಣೆಕಟ್ಟಿಗೆ ಜಲಪೂಜೆ ನೆರವೇರಿಸಿ ದೇಶಕ್ಕೆ ಸಮರ್ಪಿಸಲಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 'ನಮೋ ಶೇತ್ಕರಿ ಮಹಾಸನ್ಮಾನ್ ನಿಧಿ' ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಯೋಜನೆಯು ಮಹಾರಾಷ್ಟ್ರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 86 ಲಕ್ಷಕ್ಕೂ ಹೆಚ್ಚು ರೈತ ಫಲಾನುಭವಿಗಳಿಗೆ ವರ್ಷಕ್ಕೆ ₹6,000 ಹೆಚ್ಚುವರಿ ಮೊತ್ತ ಒದಗಿಸುವ ಮೂಲಕ ಪ್ರಯೋಜನ ನೀಡುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.