ADVERTISEMENT

ಧ್ಯಾನ್​ ಚಂದ್ ಕ್ರೀಡಾ ವಿಶ್ವವಿದ್ಯಾಲಯ ಶಂಕುಸ್ಥಾಪನೆ ಮಾಡಲಿರುವ ಪ್ರಧಾನಿ ಮೋದಿ

ಪಿಟಿಐ
Published 2 ಜನವರಿ 2022, 2:51 IST
Last Updated 2 ಜನವರಿ 2022, 2:51 IST
ಪ್ರಧಾನಿ ಮೋದಿ
ಪ್ರಧಾನಿ ಮೋದಿ   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಉತ್ತರಪ್ರದೇಶ ರಾಜ್ಯಕ್ಕೆ ಭೇಟಿ ನೀಡಲಿದ್ದು ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯದ ಶಂಕುಸ್ಥಾಪನೆ ಮಾಡಲಿದ್ದಾರೆ.

ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಮೀರತ್‌ನ ಸರ್ದಾನ್ಪಟ್ಟಣದ ಸಮೀಪದಲ್ಲಿ ಇರುವಸಲವಾ ಮತ್ತು ಕೈಲಿ ಗ್ರಾಮಗಳಲ್ಲಿ ಸುಮಾರು ₹ 700 ಕೋಟಿ ವೆಚ್ಚದಲ್ಲಿ ವಿಶ್ವವಿದ್ಯಾನಿಲಯ ಸ್ಥಾಪನೆ ಮಾಡಲಾಗುವುದು.

ADVERTISEMENT

ದೇಶದಲ್ಲಿ ವಿಶ್ವದರ್ಜೆಯ ಕ್ರೀಡಾ ಮೂಲಸೌಕರ್ಯ ಕಲ್ಪಿಸುವುದಕ್ಕಾಗಿ ಈ ಕ್ರೀಡಾ ವಿವಿಯನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ.

ಸಿಂಥೆಟಿಕ್ ಹಾಕಿ, ಫುಟ್‌ಬಾಲ್ ಅಂಗಣ, ಬಾಸ್ಕೆಟ್‌ಬಾಲ್, ವಾಲಿಬಾಲ್, ಹ್ಯಾಂಡ್‌ಬಾಲ್ ಹಾಗೂ ಟೆನ್ನಿಸ್ ಕೋರ್ಟ್ ಸೇರಿದಂತೆ ವಿವಿಧ ಕ್ರೀಡೆಗಳ ಮೈದಾನಗಳನ್ನು ನಿರ್ಮಾಣ ಮಾಡಲಾಗುವುದು. ಹಾಗೇ ಒಟ್ಟು 1,080 ಕ್ರೀಡಾಪಟುಗಳಿಗೆ ಇಲ್ಲಿ ತರಬೇತಿ ನೀಡಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.