ADVERTISEMENT

RSS ಶತಮಾನೋತ್ಸವ ಸ್ಮರಣಾರ್ಥ ಅಕ್ಟೋಬರ್‌ 1ರಂದು ಅಂಚೆ ಚೀಟಿ ಬಿಡುಗಡೆ

ಪಿಟಿಐ
Published 29 ಸೆಪ್ಟೆಂಬರ್ 2025, 16:12 IST
Last Updated 29 ಸೆಪ್ಟೆಂಬರ್ 2025, 16:12 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಶತಮಾನೋತ್ಸವ ಸಂಭ್ರಮದ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಅವರು ಅಂಚೆ ಚೀಟಿ ಮತ್ತು ನಾಣ್ಯಗಳನ್ನು ಬಿಡುಗಡೆ ಮಾಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಆರ್‌ಎಸ್‌ಎಸ್‌ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರ ಉಪಸ್ಥಿತಿಯಲ್ಲಿ ಬುಧವಾರ (ಅಕ್ಟೋಬರ್‌ 1) ಅಂಚೆ ಚೀಟಿ ಮತ್ತು ನಾಣ್ಯ ಬಿಡುಗಡೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

1925 ವಿಜಯದಶಮಿಯಂದು ಆರ್‌ಎಸ್‌ಎಸ್‌ ಸ್ಥಾಪನೆಯಾಗಿದ್ದು, ಈ ವಿಜಯದಶಮಿಗೆ 100 ವರ್ಷ ಪೊರೈಸಲಿದೆ.

ADVERTISEMENT

ಇತ್ತೀಚೆಗೆ ನಡೆದ ‘ಮನ್‌ ಕಿ ಬಾತ್‌’ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು, ಆರ್‌ಎಸ್‌ಎಸ್‌ ಸಂಘಟನೆಯ ಸ್ವಯಂಸೇವೆ, ಶಿಸ್ತು ಮತ್ತು ದೇಶ ಮೊದಲು ಎಂಬ ತತ್ವವನ್ನು ಹಾಡಿ ಹೊಗಳಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.