ADVERTISEMENT

ಮೇ 16ರಂದು ನೇಪಾಳದ ಲುಂಬಿಣಿಗೆ ಮೋದಿ ಭೇಟಿ

ಪಿಟಿಐ
Published 12 ಮೇ 2022, 13:59 IST
Last Updated 12 ಮೇ 2022, 13:59 IST
ಪ್ರಧಾನಿ ಮೋದಿ ಹಾಗೂ ನೇಪಾಳ ಪ್ರಧಾನಿ ಶೇರ್‌ ಬಹದ್ದೂರ್‌ ದೇವುಬಾ (ಸಾಂದರ್ಭಿಕ ಚಿತ್ರ)
ಪ್ರಧಾನಿ ಮೋದಿ ಹಾಗೂ ನೇಪಾಳ ಪ್ರಧಾನಿ ಶೇರ್‌ ಬಹದ್ದೂರ್‌ ದೇವುಬಾ (ಸಾಂದರ್ಭಿಕ ಚಿತ್ರ)   

ನವದೆಹಲಿ: ಬುದ್ಧ ಪೌರ್ಣಿಮೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ 16ರಂದು ನೇಪಾಳದ ಲುಂಬಿಣಿಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ನೇಪಾಳದ ಪ್ರಧಾನಿ ಶೇರ್‌ ಬಹದ್ದೂರ್‌ ದೇವುಬಾ ಅವರ ಆಹ್ವಾನದ ಮೇರೆಗೆ ಮೋದಿ ಲುಂಬಿಣಿಗೆ ಹೋಗುತ್ತಿದ್ದು, 2014ರ ಬಳಿಕ ಮೋದಿ ನೇಪಾಳಕ್ಕೆ ನೀಡುತ್ತಿರುವ ಐದನೇ ಭೇಟಿ ಇದಾಗಿದೆ.

‘ಮೋದಿಯವರು ಲುಂಬಿಣಿಯ ಪವಿತ್ರ ಮಾಯಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಬಳಿಕ ನೇಪಾಳ ಸರ್ಕಾರದ ಆಶ್ರಯದಲ್ಲಿ ಲುಂಬಿಣಿ ಅಭಿವೃದ್ಧಿ ಟ್ರಸ್ಟ್‌ ವತಿಯಿಂದ ಏರ್ಪಡಿಸಲಿರುವ ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ ಭಾಷಣ ಮಾಡಲಿದ್ದಾರೆ’ ಎಂದು ಸಚಿವಾಲಯ ಮಾಹಿತಿ ನೀಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.