ADVERTISEMENT

ಫೆ.14ರಂದು ಕತಾರ್‌ಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ಪಿಟಿಐ
Published 12 ಫೆಬ್ರುವರಿ 2024, 12:16 IST
Last Updated 12 ಫೆಬ್ರುವರಿ 2024, 12:16 IST
<div class="paragraphs"><p>ಪ್ರಧಾನಿ ಮೋದಿ</p></div>

ಪ್ರಧಾನಿ ಮೋದಿ

   

(ಚಿತ್ರ ಕೃಪೆ–ಪಿಟಿಐ)

ನವದೆಹಲಿ: ಎರಡು ದಿನಗಳ ಭೇಟಿಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನಿಂದ ಕತಾರ್‌ನ ದೋಹಾಕ್ಕೆ ಬುಧವಾರ(ಫೆ.14) ತೆರಳಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ ಸೋಮವಾರ ತಿಳಿಸಿದ್ದಾರೆ.

ADVERTISEMENT

ಈ ಭೇಟಿಯು ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಗುರಿಯನ್ನು ಹೊಂದಿದೆ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ವಿಸ್ತರಿಸಲು ಮೋದಿ ಮತ್ತು ಕತಾರ್ ಎಮಿರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರು ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ತಿಳಿಸಿದ್ದಾರೆ.

ಆಪಾದಿತ ಬೇಹುಗಾರಿಕೆ ಪ್ರಕರಣದಲ್ಲಿ ಜೈಲಿನಲ್ಲಿದ್ದ 8 ಮಂದಿ ಭಾರತೀಯ ನೌಕಾಪಡೆಯ ಸಿಬ್ಬಂದಿಯನ್ನು ಕತಾರ್‌ ಬಿಡುಗಡೆ ಮಾಡಿದ ದಿನದಂದೇ ಪ್ರಧಾನಿ ಮೋದಿಯವರ ಕತಾರ್ ಭೇಟಿಯ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.

2022ರಲ್ಲಿ ಬಂಧಿಸಲಾಗಿದ್ದ ಭಾರತೀಯ ನೌಕಾಪಡೆಯ 8 ಮಂದಿ ನಿವೃತ್ತ ಅಧಿಕಾರಿಗಳನ್ನು ಕತಾರ್ ಬಿಡುಗಡೆ ಮಾಡಿದೆ. ಅವರಿಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಇತ್ತೀಚೆಗೆ ನ್ಯಾಯಾಲಯವು ತಡೆ ಹಿಡಿದಿತ್ತು.

ಇಸ್ರೇಲ್ ಪರವಾಗಿ ಅವರು ಬೇಹುಗಾರಿಕೆ ಮಾಡುತ್ತಿದ್ದರು ಎಂಬ ಆರೋಪದಡಿ ಕಳೆದ ಅಕ್ಟೋಬರ್‌ನಲ್ಲಿ ಕತಾರ್ ನ್ಯಾಯಾಲಯವು ಮರಣ ದಂಡನೆ ಶಿಕ್ಷೆ ವಿಧಿಸಿತ್ತು. ಆದರೆ, ಅವರ ಮೇಲಿನ ಆರೋಪಗಳನ್ನು ಭಾರತ ಮತ್ತು ಕತಾರ್ ಖಚಿತಪಡಿಸಿಲ್ಲ.

ಭಾರತೀಯರನ್ನು ಬಿಡುಗಡೆಗೊಳಿಸಿದ ಕತಾರ್‌ ಸರ್ಕಾರದ ನಿರ್ಧಾರವನ್ನು ಪ್ರಶಂಸಿಸುತ್ತೇವೆ. ಬಿಡುಗಡೆಯಾದ 8 ಮಂದಿಯಲ್ಲಿ 7 ಮಂದಿ ದೇಶಕ್ಕೆ ವಾಪಸ್ ಆಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಕತಾರ್‌ನಲ್ಲಿ ಬಂಧಿತರಾಗಿರುವ ಭಾರತೀಯರನ್ನು ಮುಕ್ತಗೊಳಿಸಲು ಪ್ರಧಾನಿ ಮೋದಿ ಅವರು ಪ್ರಕರಣವನ್ನು ವೈಯಕ್ತಿಕ ಮೇಲ್ವಿಚಾರಣೆ ವಹಿಸಿದ್ದರು ಎಂದು ವಿದೇಶಾಂಗ ಕಾರ್ಯದರ್ಶಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.