ನವದೆಹಲಿ: ನವದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸಂಸತ್ ಭವನದ ಮೇಲೆ ರಾಷ್ಟ್ರೀಯ ಲಾಂಛನವನ್ನು ಇರಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅನಾವರಣಗೊಳಿಸಿದ್ದಾರೆ.
ರಾಷ್ಟ್ರೀಯ ಲಾಂಚನದ ಈ ಪ್ರತಿಮೆಯನ್ನು ಕಂಚಿನಿಂದ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅದರ ತೂಕ ಸುಮಾರು 9,500 ಕೆ.ಜಿ. ಇದ್ದು, 6.5 ಮೀಟರ್ ಎತ್ತರವಿದೆ.
‘ಇದೊಂದು ಐತಿಹಾಸಿಕ ಕ್ಷಣ. ಇದಕ್ಕೆ ಸಾಕ್ಷಿಯಾಗಿದ್ದು ವಿಶೇಷ ಭಾಗ್ಯ’ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.