ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಾಲ್ಕು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ.
ಈ ಕುರಿತು ಪ್ರಧಾನ ಮಂತ್ರಿ ಕಾರ್ಯಾಲಯ ಪ್ರಕಟಣೆ ತಿಳಿಸಿದೆ.
ಅಮೆರಿಕ ಪ್ರವಾಸದಲ್ಲಿ ಪ್ರಧಾನಿ ಮೋದಿ ನ್ಯೂಯಾರ್ಕ್ ಮತ್ತು ವಾಷಿಂಗ್ಟನ್ ಡಿಸಿಯಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದು ವಿಶ್ವಸಂಸ್ಥೆಯಲ್ಲಿ ಯೋಗ ದಿನಾಚರಣೆಯನ್ನು ಒಳಗೊಂಡಿರಲಿದೆ ಎಂದು ತಿಳಿಸಿದೆ.
ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ಪ್ರಧಾನಿ ಮಾತುಕತೆ ನಡೆಸಲಿದ್ದಾರೆ. ಅಮೆರಿಕ ಕಾಂಗ್ರೆಸ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ.
ಅಮೆರಿಕದಲ್ಲಿ ಉದ್ಯಮಿಗಳನ್ನು, ಅನಿವಾಸಿ ಭಾರತೀಯರನ್ನು ಮೋದಿ ಭೇಟಿಯಾಗಲಿದ್ದಾರೆ. ವ್ಯಾಪಾರ, ವಾಣಿಜ್ಯ, ತಂತ್ರಜ್ಞಾನ, ನಾವೀನ್ಯತೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಭಾರತ-ಅಮೆರಿಕ ಬಾಂಧವ್ಯ ಮತ್ತಷ್ಟು ಬಲವರ್ಧನೆಯಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.