ADVERTISEMENT

ಎರಡನೇ ಬಾರಿ ಪ್ರಧಾನಿಯಾದ ನಂತರ ಮಾಲ್ಡೀವ್ಸ್‌ ಪ್ರವಾಸ ಕೈಗೊಳ್ಳಲಿದ್ದಾರೆ ಮೋದಿ

​ಪ್ರಜಾವಾಣಿ ವಾರ್ತೆ
Published 26 ಮೇ 2019, 12:48 IST
Last Updated 26 ಮೇ 2019, 12:48 IST
   

ನವದೆಹಲಿ: ಎರಡನೇ ಬಾರಿ ಪ್ರಧಾನಿಯಾಗಿರುವ ನರೇಂದ್ರಮೋದಿ ಮಾಲ್ಡೀವ್ಸ್‌ಗೆ ಮೊದಲ ಪ್ರವಾಸ ಕೈಗೊಳ್ಳಲಿದ್ದಾರೆಎಂದು ಸರ್ಕಾರದ ಮೂಲಗಳು ಹೇಳಿವೆ.

ಮಾಲ್ಡೀವ್ಸ್ ಸ್ಥಳೀಯ ಸುದ್ದಿವಾಹಿನಿ ರಜ್ಜೀ ಟಿವಿ ಪ್ರಕಾರ, ಮೋದಿಯವರು ಜೂನ್ 7 ಮತ್ತು 8ರಂದು ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ.

2014ರಲ್ಲಿ ಪ್ರಧಾನಿಯಾದಾಗ ಮೋದಿ ಭೂತಾನ್‌ಗೆ ಮೊದಲ ಪ್ರವಾಸ ಕೈಗೊಂಡಿದ್ದರು.ದಕ್ಷಿಣ ಏಷ್ಯಾದಲ್ಲಿನ ವಿದೇಶ ನೀತಿಗಳಿಗೆ ಹೆಚ್ಚಿನ ಆದ್ಯತೆ ನೀಡಿ ಮೋದಿ ಭೂತಾನ್‌ನ್ನು ಆಯ್ಕೆ ಮಾಡಿಕೊಂಡಿದ್ದರು.

ADVERTISEMENT

ಕಳೆದ ನವೆಂಬರ್‌ನಲ್ಲಿ ಮೋದಿ ಮಾಲ್ಡೀವ್ಸ್‌ಗೆ ಪ್ರವಾಸ ಹೋಗಿದ್ದು ಅಲ್ಲಿನ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೊಲಿಹ್ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.