
ಪಿಟಿಐ
ಪ್ರಧಾನಿ ನರೇಂದ್ರ ಮೋದಿ ಅವರು ಕಾರು ಸ್ಫೋಟದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆ ಸಮೀಪದ ಕಾರು ಸ್ಫೋಟದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಯಲ್ಲಿ ಬುಧವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
‘ಭೂತಾನ್‌ನಿಂದ ಮರಳಿದ ಪ್ರಧಾನಿ ಅವರು ನೇರವಾಗಿ ಎಲ್‌ಎನ್‌ಜೆಪಿ ಆಸ್ಪತ್ರೆಗೆ ತೆರಳಿದರು’ ಎಂದು ಅಧಿಕಾರಿಗಳು ತಿಳಿಸಿದರು.
ಗಾಯಾಳುಗಳೊಂದಿಗೆ ಮಾತನಾಡಿ, ಶೀಘ್ರ ಗುಣಮುಖರಾಗಿ ಎಂದು ಹಾರೈಸಿದರು. ಆಸ್ಪತ್ರೆಯ ವೈದ್ಯರು, ಅಧಿಕಾರಿಗಳೊಂದಿಗೂ ಸಂವಾದ ನಡೆಸಿದರು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.