ಪ್ರಧಾನಿ ನರೇಂದ್ರ ಮೋದಿ
ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಗೆ ಆಗಮಿಸಿದ್ದು ಗುರುವಾರ ರಾತ್ರಿ ಹೆದ್ದಾರಿ ಪರಿಶೀಲನೆ ನಡೆಸಿದರು.
ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಕಾಶಿಗೆ ಬಂದಿಳಿದ ಪ್ರಧಾನಿ ಮೋದಿ, ಶಿವಪುರ-ಫುಲ್ವಾರಿಯಾ-ಲಹರ್ತಾರಾ ಹೆದ್ದಾರಿಯನ್ನು ಪರಿಶೀಲಿಸಿದರು. ಹೆದ್ದಾರಿ ಪರಿಶೀಲನೆ ನಡೆಸಿದ ಬಗ್ಗೆ ಪ್ರಧಾನಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಹಾಗೂ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಈ ಹೆದ್ದಾರಿ ಇತ್ತೀಚೆಗೆ ಉದ್ಘಾಟನೆಗೊಂಡಿತ್ತು. ನಗರದ ದಕ್ಷಿಣ ಭಾಗದ ಜನರಿಗೆ ಇದು ಬಹಳ ಸಹಾಯಕವಾಗಿದೆ ಎಂದು ಮೋದಿ ಎಕ್ಸ್ನಲ್ಲಿ ತಿಳಿಸಿದ್ದಾರೆ.
ಮೋದಿ ಅವರು ಇಂದು ವಾರಾಣಸಿಯಲ್ಲಿ ₹13,000 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.