ADVERTISEMENT

ರಾಷ್ಟ್ರವನ್ನುದ್ದೇಶಿಸಿ ಇಂದು ರಾತ್ರಿ 8ಕ್ಕೆ ಪ್ರಧಾನಿ ನರೇಂದ್ರ ಮೋದಿ ಮಾತು

ಪಿಟಿಐ
Published 12 ಮೇ 2025, 11:04 IST
Last Updated 12 ಮೇ 2025, 11:04 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೋಮವಾರ) ರಾತ್ರಿ 8ಕ್ಕೆ ಮಾತನಾಡಲಿದ್ದಾರೆ.

ಈ ಕುರಿತು ಪಿಟಿಐ ಟ್ವೀಟ್ ಮಾಡಿದೆ.

ಏ. 22ರಂದು ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಪಾಕಿಸ್ತಾನ ನೆಲೆಯ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಕರ್ನಾಟಕದ ಮೂವರು ಸೇರಿದಂತೆ 26 ಜನ ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತವು ‘ಆಪರೇಷನ್ ಸಿಂಧೂರ‘ವನ್ನು ಮೇ 7ರಿಂದ ಆರಂಭಿಸಿ, ಉಗ್ರರ ನೆಲೆಯನ್ನು ಧ್ವಂಸಗೊಳಿಸಿತು.

ADVERTISEMENT

ಇದರ ಬೆನ್ನಲ್ಲೇ ಪಾಕಿಸ್ತಾನ ನಡೆಸಿದ ಸೇನಾ ದಾಳಿಯ ಯತ್ನಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆಯೂ ರಕ್ಷಣಾ ಕಾರ್ಯ ಕೈಗೊಂಡಿತ್ತು. ಶನಿವಾರ ಕದನ ವಿರಾಮ ಘೋಷಣೆಯಾದ ಬಳಿಕ ಸೋಮವಾರ ಉಭಯ ರಾಷ್ಟ್ರಗಳ ಸೇನಾಧಿಕಾರಿಗಳ ಸಭೆ ಆಯೋಜನೆಗೊಂಡಿದೆ.

ಇದೇ ಸಂದರ್ಭದಲ್ಲಿ ಪ್ರಧಾನಿ ಅವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.