ADVERTISEMENT

ಬೃಹತ್‌ ಉದ್ಯೋಗ ಮೇಳಕ್ಕೆ ಇಂದು ಮೋದಿ ಚಾಲನೆ: 10 ಲಕ್ಷ ಮಂದಿಗೆ ಉದ್ಯೋಗಾವಕಾಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಅಕ್ಟೋಬರ್ 2022, 2:11 IST
Last Updated 22 ಅಕ್ಟೋಬರ್ 2022, 2:11 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಡೆಯಲಿರುವ ಬೃಹತ್‌ ಉದ್ಯೋಗ ಮೇಳಕ್ಕೆ (ರೋಜ್‌ಗಾರ್‌ ಮೇಳ) ವಿಡಿಯೊ ಕಾನ್ಫರೆನ್ಸ್‌ ಮೂಲಕ ಚಾಲನೆ ನೀಡಲಿದ್ದಾರೆ.

‘ವಿವಿಧ ಇಲಾಖೆಗಳಲ್ಲಿ ಒಟ್ಟು 10 ಲಕ್ಷ ಮಂದಿಗೆ ಉದ್ಯೋಗವಕಾಶ ಕಲ್ಪಿಸುವುದು ಈ ಮೇಳದ ಉದ್ದೇಶವಾಗಿದೆ. ಕಾರ್ಯಕ್ರಮದ ವೇಳೆ ಮೋದಿ ಅವರು 75 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಯುವಜನರನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ’ ಎಂದು ಪ್ರಧಾನ ಮಂತ್ರಿಯವರ ಕಾರ್ಯಾಲಯ ತಿಳಿಸಿದೆ.

ಮೋದಿ ಅವರು ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಸಚಿವಾಲಯಗಳಲ್ಲಿರುವ ಸಿಬ್ಬಂದಿಯ ಮಾಹಿತಿ ಪಡೆದಿದ್ದು, ಅದರ ಆಧಾರದಲ್ಲಿ 10 ಲಕ್ಷ ಮಂದಿಗೆ ಉದ್ಯೋಗವಕಾಶ ಕಲ್ಪಿಸಲು ನಿರ್ಣಯ ಕೈಗೊಳ್ಳಲಾಗಿದೆ.

ADVERTISEMENT

ಇಂದು ಸಂಜೆ ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಅದರಂತೆ ಯೋಜನೆಯ ಸುಮಾರು 4.51 ಲಕ್ಷ ಫಲಾನುಭವಿಗಳಿಗೆ ಮಧ್ಯಪ್ರದೇಶದಲ್ಲಿ ಹೊಸ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರ ಮಾಡಲಾಗುತ್ತಿದೆ. ₹35,000 ಕೋಟಿ ವೆಚ್ಚದ ಯೋಜನೆ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.