ADVERTISEMENT

ಅಯೋಧ್ಯೆ: ಡಿ. 30ರಂದು ಪ್ರಧಾನಿ ನರೇಂದ್ರ ಮೋದಿ ರೋಡ್‌ ಶೋ

ಪಿಟಿಐ
Published 24 ಡಿಸೆಂಬರ್ 2023, 15:15 IST
Last Updated 24 ಡಿಸೆಂಬರ್ 2023, 15:15 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ಅಯೋಧ್ಯೆ(ಉತ್ತರಪ್ರದೇಶ): ಪ್ರಧಾನಿ ನರೇಂದ್ರ ಮೋದಿ ಅವರು ಇದೇ 30ರಂದು ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ ಉದ್ಘಾಟಿಸಿ, ಬಳಿಕ ರೋಡ್‌ ಶೋ ನಡೆಸಲಿದ್ದಾರೆ.

ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣಗಳ ನಡುವೆ 15 ಕಿ.ಮೀ ವರೆಗೆ ರೋಡ್‌ ಶೋ ನಡೆಯಲಿದೆ. ಬಳಿಕ ಮೋದಿ ಅವರು ಸಾರ್ವಜನಿಕ ಸಭೆಯಲ್ಲಿ ಮಾತನಾಡುವರು ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ರೋಡ್‌ ಶೋ ಹಾದುಹೋಗುವ 51 ಕಡೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾಧು, ಸಂತರು ಮೋದಿ ಅವರನ್ನು ಆಶೀರ್ವದಿಸಲಿದ್ದಾರೆ ಎಂದಿದ್ದಾರೆ. ಹನುಮಾನ್‌ ಗರ್ಹಿ ದೇಗುಲಕ್ಕೂ ಅವರು ಭೇಟಿ ನೀಡುವ ನಿರೀಕ್ಷೆ ಇದೆ.

ADVERTISEMENT

ಅಯೋಧ್ಯೆಯ ನವೀಕೃತ ರೈಲು ನಿಲ್ದಾಣದ ಉದ್ಘಾಟನೆಯನ್ನೂ ಪ್ರಧಾನಿ ನೆರವೇರಿಸುವರು. ಬಳಿಕ ವಂದೇ ಭಾರತ್‌ ಮತ್ತು ಅಮೃತ್‌ ಭಾರತ್‌ ರೈಲುಗಳಿಗೆ ಚಾಲನೆ ನೀಡುವರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಜನವರಿ 22 ರಂದು ನಡೆಯಲಿರುವ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಗೆ ಪೂರ್ವಭಾವಿಯಾಗಿ ಈ ವಿಮಾನ ನಿಲ್ದಾಣ ಉದ್ಘಾಟನೆಗೊಳ್ಳುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.