ADVERTISEMENT

ಸೋನಿಯಾ ಗಾಂಧಿ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಡಿಸೆಂಬರ್ 2021, 5:11 IST
Last Updated 9 ಡಿಸೆಂಬರ್ 2021, 5:11 IST
ಸಮಾರಂಭವೊಂದರಲ್ಲಿ ಸೋನಿಯಾ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ
ಸಮಾರಂಭವೊಂದರಲ್ಲಿ ಸೋನಿಯಾ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ    

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಜನ್ಮದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಶುಭಾಶಯ ಕೋರಿದ್ದಾರೆ.

‘ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ,‘ ಎಂದು ಮೋದಿ ಅವರು ಒಂದು ಸಾಲಿನ ಟ್ವೀಟ್‌ ಮಾಡಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷರಾಗಿ ದೀರ್ಘಕಾಲ ಸೇವೆ ಸಲ್ಲಿಸಿರುವ ಗಾಂಧಿ ಅವರು ಗುರುವಾರ ತಮ್ಮ 75ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.