ಅಹಮದಾಬಾದ್: ಕೋವಿಡ್–19ಗೆ ತುತ್ತಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಚಿಕ್ಕಮ್ಮ ನರ್ಮದಾ ಬೆನ್ ಮೋದಿ (80) ಮಂಗಳವಾರ ಮೃತಪಟ್ಟಿದ್ದಾರೆ.
‘ಕೊರೊನಾ ಸೋಂಕಿನಿಂದಾಗಿ ಚಿಕ್ಕಮ್ಮ ನರ್ಮದಾ ಬೆನ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಅವರನ್ನು ಹತ್ತು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಕೊನೆಯುಸಿರೆಳೆದಿದ್ದಾರೆ’ ಎಂದು ಪ್ರಧಾನ ಮಂತ್ರಿಯ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.