ADVERTISEMENT

ಪ್ರಧಾನಿ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಚೆನ್ನೈ ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಫೆಬ್ರುವರಿ 2023, 7:33 IST
Last Updated 28 ಫೆಬ್ರುವರಿ 2023, 7:33 IST
ಪ್ರಹ್ಲಾದ್ ಮೋದಿ
ಪ್ರಹ್ಲಾದ್ ಮೋದಿ    

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಿಡ್ನಿ ಸಮಸ್ಯೆಯಿಂದಾಗಿ ಅವರನ್ನು ಅಯನಂಬಾಕ್ಕಂನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಮಿಳುನಾಡು ಮಾಧ್ಯಮಗಳು ವರದಿ ಮಾಡಿವೆ.

ಪ್ರಹ್ಲಾದ್ ಮೋದಿ ಅವರು ತಮ್ಮ ಕುಟುಂಬದೊಂದಿಗೆ ತಮಿಳುನಾಡು ಹಾಗೂ ಕೇರಳದ ಆಧ್ಯಾತ್ಮಿಕ ಕ್ಷೇತ್ರಗಳ ಪ್ರವಾಸದಲ್ಲಿದ್ದಾರೆ. ಅನಿರೀಕ್ಷಿತವಾಗಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಪರಿಣಾಮ ಅವರನ್ನು ಚೆನ್ನೈ ಆಸ್ಪತ್ರೆಗೆ ದಾಖಲು ಮಾಡಲಾಯಿತು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ADVERTISEMENT

ಸದ್ಯ ಅವರಿಗೆ ಚಿಕಿತ್ಸೆ ಮುಂದವರಿಸಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.