ADVERTISEMENT

ಜೂನ್ 18ಕ್ಕೆ ಪ್ರಧಾನಿ ಮೋದಿ ತಾಯಿ ಶತಾಯುಷಿ

ಪಿಟಿಐ
Published 15 ಜೂನ್ 2022, 14:29 IST
Last Updated 15 ಜೂನ್ 2022, 14:29 IST
ತಾಯಿ ಹೀರಾಬೆನ್ ಅವರ ಜೊತೆ ಪ್ರಧಾನಿ ನರೇಂದ್ರ ಮೋದಿ
ತಾಯಿ ಹೀರಾಬೆನ್ ಅವರ ಜೊತೆ ಪ್ರಧಾನಿ ನರೇಂದ್ರ ಮೋದಿ   

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಜೂನ್ 18ರಂದು 100ನೇ ವರ್ಷಕ್ಕೆ ಕಾಲಿಡಲಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಅಂದು ಗುಜರಾತ್‌ಗೆ ಭೇಟಿ ನೀಡಲಿರುವ ಮೋದಿ ಅವರು, ಹೀರಾಬೆನ್ ಅವರನ್ನು ಭೇಟಿ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಲಿದ್ದಾರೆ. ಆ ಬಳಿಕ ವಡೋದರಾದಲ್ಲಿ ರ್‍ಯಾಲಿಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಹೀರಾಬೆನ್ ಅವರಿಗೆ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯ ಪ್ರಾಪ್ತವಾಗಲಿ ಎಂದು ಹಾರೈಸಿ ಮೋದಿ ಅವರ ಹುಟ್ಟೂರು ವಡನಗರದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಅವರ ಕುಟುಂಬಸ್ಥರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT