ನವದೆಹಲಿ: ‘ವಿದ್ಯಾರ್ಥಿಗಳೊಂದಿಗಿನ‘ಪರೀಕ್ಷಾ ಪೆ ಚರ್ಚಾ’ ವಾರ್ಷಿಕ ಸಂವಾದ ಕಾರ್ಯಕ್ರಮವನ್ನು ಇದೇ 7 ರಂದು ಹೊಸ ಸ್ವರೂಪದಲ್ಲಿ ನಡೆಸಲಾಗುವುದು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ತಿಳಿಸಿದರು.
ಈ ಬಾರಿಯ ‘ಪರೀಕ್ಷಾ ಪೆ ಚರ್ಚಾ’ ವೇಳೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತಾಗಿ ಆಸಕ್ತಿದಾಯಕ ಪ್ರಶ್ನಾವಳಿಗಳು ಮತ್ತು ಎಕ್ಸಾಂ ವಾರಿಯರ್ಸ್, ಪೋಷಕರು ಮತ್ತು ಶಿಕ್ಷಕರೊಂದಿಗೆ ಮಹತ್ವಪೂರ್ಣ ವಿಷಯಗಳ ಬಗ್ಗೆ ಚರ್ಚೆಗಳನ್ನು ನಡೆಸಲಾಗುವುದು. ಈ ಕಾರ್ಯಕ್ರಮವು ಏಪ್ರಿಲ್ 7ರಂದು ರಾತ್ರಿ 7 ಗಂಟೆಗೆ ಪ್ರಸಾರವಾಗಲಿದೆ ’ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಕೋವಿಡ್ ದೃಷ್ಟಿಯಿಂದಈ ಬಾರಿಯ ‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮವನ್ನು ಆನ್ಲೈನ್ನಲ್ಲಿ ನಡೆಸುವುದಾಗಿ ಸರ್ಕಾರ ಈ ಹಿಂದೆ ಹೇಳಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.