ADVERTISEMENT

ಪ್ರಧಾನಿ ಮೋದಿ ಭೇಟಿ: ಕೇರಳದಲ್ಲಿ ಬಿಜೆಪಿ ಗೆಲುವಿಗೆ ನೆರವಾಗುವುದಿಲ್ಲ–ಕಾಂಗ್ರೆಸ್‌

ಪಿಟಿಐ
Published 17 ಜನವರಿ 2024, 11:22 IST
Last Updated 17 ಜನವರಿ 2024, 11:22 IST
<div class="paragraphs"><p>ಪ್ರಧಾನಿ ನರೇಂದ್ರ ಮೋದಿ</p></div>

ಪ್ರಧಾನಿ ನರೇಂದ್ರ ಮೋದಿ

   

ಕೋಯಿಕ್ಕೋಡ್ (ಕೇರಳ): ಪ್ರಧಾನಿ ನರೇಂದ್ರ ಮೋದಿ ಅವರು ಮುಂಬರುವ ಲೋಕಸಭೆ ಚುನಾವಣೆಯ ದೃಷ್ಟಿಯಿಂದಾಗಿ ಕೇರಳಕ್ಕೆ ಸತತವಾಗಿ ಭೇಟಿ ನೀಡುತ್ತಿದ್ದರೂ ರಾಜ್ಯದಲ್ಲಿ ಬಿಜೆಪಿ ಖಾತೆ ತೆರೆಯಲು ನೆರವಾಗುವುದಿಲ್ಲ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್ ಅವರು, ಬಿಜೆಪಿಯು ಜನರ ಮಧ್ಯೆ ಒಡಕು ಮೂಡಿಸಲು ಹಾಗೂ ಧರ್ಮ ಮತ್ತು ಧಾರ್ಮಿಕ ಸ್ಥಳಗಳನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ADVERTISEMENT

ಕೇರಳದ ಜನರು ಜಾತ್ಯತೀತ ಭಾವನೆಯನ್ನು ಹೊಂದಿದ್ದು, ಕೋಮುವಾದವನ್ನು ವಿರೋಧಿಸುತ್ತಾರೆ. ದ್ವೇಷದ ಪ್ರಚಾರಗಳಿಗೆ ಒಳಗಾಗುವುದಿಲ್ಲ ಎಂದಿದ್ದಾರೆ.

ಕೇರಳದಲ್ಲಿ ಕ್ರೈಸ್ತರ ಮನೆಗಳಿಗೆ ಭೇಟಿ ನೀಡುವವರೇ ಚರ್ಚ್‌ಗಳನ್ನು ಸುಟ್ಟು ಹಾಕಿದ್ದಾರೆ. ಅವರ ( ಬಿಜೆಪಿ) ನಿಜ ಬಣ್ಣವನ್ನು ಅರ್ಥ ಮಾಡಿಕೊಳ್ಳುವಷ್ಟು ಬುದ್ಧಿವಂತಿಕೆಯನ್ನು ರಾಜ್ಯದ ಜನತೆ ಹೊಂದಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ನ್ಯಾಯ ಯಾತ್ರೆಯ ಮೇಲೆ ದೇಶದ ಜನರು ಸಾಕಷ್ಟು ನಿರೀಕ್ಷೆಗಳೊಂದಿಗೆ ಕಾಯುತ್ತಿದ್ದಾರೆ ಎಂದು ಸತೀಶನ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.