ADVERTISEMENT

ಪೆಗಾಸಸ್‌ ಗೂಢಚರ್ಯೆ: ಪ್ರಧಾನಿ, ಗೃಹ ಸಚಿವರ ಸ್ಪಷ್ಟನೆಗೆ ಶಿವಸೇನಾ ಒತ್ತಾಯ

ಪಿಟಿಐ
Published 19 ಜುಲೈ 2021, 9:34 IST
Last Updated 19 ಜುಲೈ 2021, 9:34 IST
ಸಂಜಯ್ ರಾವುತ್‌
ಸಂಜಯ್ ರಾವುತ್‌   

ಮುಂಬೈ: ಪೆಗಾಸಸ್‌ ತಂತ್ರಾಂಶದ ಮೂಲಕ ಪತ್ರಕರ್ತರು ಸೇರಿದಂತೆ ದೇಶದ ವಿವಿಧ ವರ್ಗಗಳ ಜನರ ಮೇಲೆ ಕಣ್ಗಾವಲು ನಡೆಸುತ್ತಿರುವ ಆರೋಪದ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಸ್ಪಷ್ಟನೆ ನೀಡಬೇಕು ಎಂದು ಶಿವಸೇನಾ ಸಂಸದ ಸಂಜಯ್ ರಾವುತ್‌ ಒತ್ತಾಯಿಸಿದ್ದಾರೆ.

ನವದೆಹಲಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾವುತ್‌, ’ಇಂಥ ಕ್ರಮಗಳಿಂದಾಗಿ ಸರ್ಕಾರ ಮತ್ತು ಆಡಳಿತ ಎರಡೂ ದುರ್ಬಲವಾಗಿವೆ ಎಂಬುದನ್ನು ಸಾಬೀತುಪಡಿಸುತ್ತವೆ ಎಂದು ತಿಳಿಸಿದರು.

’ಪ್ರಸ್ತುತ ದೇಶದಲ್ಲಿ ಜನರು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ. ಆದ್ದರಿಂದ ಪ್ರಧಾನಿ ಮತ್ತು ಗೃಹ ಸಚಿವರು, ಈ ವಿಷಯದ ಬಗ್ಗೆ ತಕ್ಷಣವೇ ಸ್ಪಷ್ಟನೆ ನೀಡಬೇಕು’ ಎಂದು ರಾವುತ್‌ ಒತ್ತಯಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.