ADVERTISEMENT

ವೀರ ಸಾವರ್ಕರ್ ಜನ್ಮದಿನ: ಪ್ರಧಾನಿ, ಉಪರಾಷ್ಟ್ರಪತಿ ಸೇರಿ ಗಣ್ಯರಿಂದ ಗೌರವ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 28 ಮೇ 2021, 7:03 IST
Last Updated 28 ಮೇ 2021, 7:03 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಮತ್ತು ಹಿಂದುತ್ವ ವಿಚಾರವಾದಿ ವೀರ ಸಾವರ್ಕರ್ ಅವರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಸೇರಿದಂತೆ ಹಲವು ಗಣ್ಯರು ಶುಕ್ರವಾರ ಗೌರವ ಸಲ್ಲಿಸಿದ್ದಾರೆ.

‘ಸ್ವಾತಂತ್ರ್ಯ ಹೋರಾಟದ ಮಹಾನ್‌ ಸೇನಾನಿ ಮತ್ತು ಪ್ರಖರ ರಾಷ್ಟ್ರಭಕ್ತ ವೀರ ಸಾವರ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಗೌರವ ಸಲ್ಲಿಸುತ್ತೇನೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

‘ಸ್ವಾತಂತ್ರ್ಯ ಹೋರಾಟದ ಮಹಾನ್‌ ಸೇನಾನಿ ಮತ್ತು ಸಮಾಜ ಸುಧಾರಕ ವೀರ ಸಾವರ್ಕರ್ ಅವರ ಜಯಂತಿ ಪ್ರಯುಕ್ತ ಗೌರವ ಸಲ್ಲಿಸುತ್ತೇನೆ. ಭಾರತದ ಸ್ವಾತಂತ್ರ್ಯಕ್ಕಾಗಿ ಅವರು ಮಾಡಿದ ತ್ಯಾಗ ಮತ್ತು ಜಾತಿವಾದ ನಿರ್ಮೂಲನೆ ಮಾಡುವ ಮೂಲಕ ಸಾಮಾಜಿಕ ಸಾಮರಸ್ಯ ಮತ್ತು ಐಕ್ಯತೆ ಬಲಪಡಿಸುವ ಪ್ರಯತ್ನಗಳು ಹಿಂದಿನ ಯುವ ಪೀಳಿಗೆಗೆ ಸ್ಫೂರ್ತಿಯಾಗಿವೆ’ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಟ್ವೀಟ್ ಮಾಡಿದ್ದಾರೆ.

ADVERTISEMENT

1883ರಲ್ಲಿ ವಿನಾಯಕ ದಾಮೋದರ ಸಾವರ್ಕರ್ ಅವರು ಮಹಾರಾಷ್ಟ್ರದಲ್ಲಿ ಜನಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.