ADVERTISEMENT

G20 Summit: ‘ಜಿ20 ಇಂಡಿಯಾ’ ಆ್ಯಪ್ ಡೌನ್‌ಲೋಡ್‌ ಮಾಡಿಕೊಳ್ಳಲು ಮೋದಿ ಮನವಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಸೆಪ್ಟೆಂಬರ್ 2023, 9:20 IST
Last Updated 6 ಸೆಪ್ಟೆಂಬರ್ 2023, 9:20 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೆಪ್ಟೆಂಬರ್ 7‌ರಿಂದ 11 ರವರೆಗೆ ಜಿ20 ಶೃಂಗಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ‘ಜಿ20 ಇಂಡಿಯಾ’ ಮೊಬೈಲ್ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಜಿ20 ಶೃಂಗಸಭೆಗೂ ಮೊದಲು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆ್ಯಪ್ ಬಿಡುಗಡೆಗೆ ಸಂಬಂಧಿಸಿ ಸಚಿವರು ಮತ್ತು ಅಧಿಕಾರಿಗಳು ಸಲಹೆ ನೀಡಿದ್ದರು. ಶೃಂಗಸಭೆಯಲ್ಲಿ ಭಾಗವಹಿಸಲಿರುವ ವಿದೇಶಿ ಪ್ರತಿನಿಧಿಗಳೊಂದಿಗೆ ಸಂವಹನ ನಡೆಸಲು ಆ್ಯಪ್ ಸಹಾಯವಾಗುತ್ತದೆ ಎಂದು ಮೋದಿ ಹೇಳಿದ್ದಾರೆ.

ಭಾರತದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯವು 'ಜಿ20 ಇಂಡಿಯಾ' ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಅಪ್ಲಿಕೇಶನ್‌ ಬಳಕೆದಾರರಿಗೆ ಶೃಂಗಸಭೆಗೆ ಸಂಬಂಧಿತ ಸಮಗ್ರ ಮಾಹಿತಿ ಒದಗಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.