ADVERTISEMENT

ಶಾಂತಿ ಬಯಸುತ್ತೇವೆ: ಶಾಹಬಾಝ್‌ ಷರೀಫ್‌ಗೆ ಅಭಿನಂದನೆ ಸಲ್ಲಿಸಿದ ಮೋದಿ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 4:50 IST
Last Updated 12 ಏಪ್ರಿಲ್ 2022, 4:50 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: ಪಾಕಿಸ್ತಾನದ ನೂತನ ಪ್ರಧಾನಿ ಶಾಹಬಾಝ್‌ ಷರೀಫ್‌ ಅವರಿಗೆ ಅಭಿನಂದನೆ ಸಲ್ಲಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಭಾರತವು ಶಾಂತಿ, ಸ್ಥಿರತೆಯನ್ನು ಬಯಸುತ್ತದೆ. ಇದರಿಂದ ಅಭಿವೃದ್ಧಿ ಸವಾಲುಗಳತ್ತ ಕೇಂದ್ರೀಕರಿಸಬಹುದು. ಅಲ್ಲದೆ ಜನರ ಯೋಗಕ್ಷೇಮ, ಸಮೃದ್ಧಿಯನ್ನು ಖಾತ್ರಿಪಡಿಸಿಕೊಳ್ಳಬಹುದು’ ಎಂದಿದ್ದಾರೆ.

‘ನಾವು ಭಾರತದೊಂದಿಗೆ ಉತ್ತಮ ಬಾಂಧವ್ಯವನ್ನು ಬಯಸುತ್ತೇವೆ. ಆದರೆ, ಕಾಶ್ಮೀರ ವಿವಾದವನ್ನು ಪರಿಹರಿಸುವವರೆಗೆ ಶಾಂತಿ ಸಾಧ್ಯವಿಲ್ಲ’ ಎಂದು ಶಾಹಬಾಝ್‌ ಷರೀಫ್‌ ಹೇಳಿದ ಬೆನ್ನಲ್ಲೇ ಮೋದಿ ಈ ಪ್ರತಿಕ್ರಿಯೆ ನೀಡಿದ್ದಾರೆ.

‘ಕಾಶ್ಮೀರದ ಜನರಿಗೆ ನೈತಿಕ ಬೆಂಬಲ ನೀಡುತ್ತೇವೆ. ಕಾಶ್ಮೀರದ ಜನರಿಗಾಗಿ ಪ್ರತಿ ವೇದಿಕೆಯಲ್ಲಿ ಧ್ವನಿ ಎತ್ತುತ್ತೇವೆ, ರಾಜತಾಂತ್ರಿಕ ಬೆಂಬಲವನ್ನು ನೀಡಲಾಗುವುದು’ ಎಂದು ಹೇಳಿದ್ದಾರೆ.

ADVERTISEMENT

ಶಾಹಬಾಝ್‌ ಷರೀಫ್ ಅವರು ಪಾಕಿಸ್ತಾನದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ನರೇಂದ್ರ ಮೋದಿ ಟ್ವೀಟ್‌ ಮೂಲಕ ಶುಭ ಹಾರೈಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.