ADVERTISEMENT

ಮಲ್ಲಿಕಾರ್ಜುನ ಖರ್ಗೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2022, 14:36 IST
Last Updated 19 ಅಕ್ಟೋಬರ್ 2022, 14:36 IST
ಖರ್ಗೆ, ಮೋದಿ
ಖರ್ಗೆ, ಮೋದಿ   

ನವದೆಹಲಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿ ಫಲಪ್ರದವಾಗಿರಲಿ ಎಂದು ಟ್ವೀಟ್‌ ಮಾಡಿದ್ದಾರೆ.

ಪಕ್ಷದ ಆಂತರಿಕ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ7,897 ಮತಗಳನ್ನು ಪಡೆದು ಆಯ್ಕೆಯಾದರು. ಇವರ ಎದುರು ಸ್ಪರ್ಧೆ ಮಾಡಿದ್ದ ಶಶಿ ತರೂರ್‌ 1072 ಮತಗಳನ್ನು ಪಡೆದು ಪರಾಭವಗೊಂಡರು.

ADVERTISEMENT

ಮಲ್ಲಿಕಾರ್ಜುನ ಖರ್ಗೆ ಅವರು ಅಕ್ಟೋಬರ್‌ 26ರಂದು ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು

ರಬ್ಬರ್ ಸ್ಟ್ಯಾಂಪ್‌– ಆರೋಪ: ‘ಸದೃಢ ಪ್ರಜಾಪ್ರಭುತ್ವಕ್ಕೆ ಪ್ರಬಲ ವಿರೋಧ ಪಕ್ಷದ ಅಗತ್ಯವಿದೆ. ಸುದೀರ್ಘಾವಧಿಯ ನಂತರ ಕಾಂಗ್ರೆಸ್ ಪಕ್ಷವು ತನ್ನ ಕುಟುಂಬದರನ್ನು ಹೊರತುಪಡಿಸಿ, ತಮ್ಮ ರಬ್ಬರ್ ಸ್ಟ್ಯಾಂಪ್ ರೀತಿ ಇರುವವರನ್ನು ಅಧ್ಯಕ್ಷರಾನ್ನಾಗಿ ನೇಮಿಸಿದೆ. ಆಂತರಿಕ ಚುನಾವಣೆ ಎಂಬುದು ಬರೀ ನಾಟಕ’ ಎಂದು ರಾಜಸ್ಥಾನದ ಬಿಜೆಪಿ ಮುಖಂಡ ರಾಜ್ಯವರ್ಧನ್ ರಾಥೋಡ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.