ADVERTISEMENT

ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸರಿಗೆ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2019, 9:50 IST
Last Updated 17 ನವೆಂಬರ್ 2019, 9:50 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಮಾಜಿ ರಕ್ಷಣಾ ಕಾರ್ಯದರ್ಶಿ ಗೊಟಬಯ ರಾಜಪಕ್ಸ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶುಭಾಶಯಗಳನ್ನು ಕೋರಿದ್ದಾರೆ.

ಮಾಜಿ ಅಧ್ಯಕ್ಷ ಮಹಿಂದಾ ರಾಜಪಕ್ಸ ಅವರ ಸೋದರರಾಗಿರುವ ಗೊಟಬಯ ಅವರು ಶೇ. 51. 9ರಷ್ಟು ಮತಗಳನ್ನು ಗಳಿಸುವ ಮೂಲಕ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷೀಯ ಚುನಾವಣೆಯಲ್ಲಿ ವಿಜಯ ಸಾಧಿಸಿರುವ ಗೊಟಬಯ ರಾಜಪಕ್ಸ ಅವರಿಗೆ ಅಭಿನಂದನೆಗಳು. ಉಭಯ ದೇಶಗಳು ಮತ್ತು ನಾಗರಿಕರ ನಡುವಿನ ಆಪ್ತ ಮತ್ತು ಭ್ರಾತೃತ್ವದ ಸಂಬಂಧಗಳನ್ನು ಗಾಢವಾಗಿಸಲು ಮತ್ತು ನಮ್ಮ ಪ್ರದೇಶದಲ್ಲಿ ಶಾಂತಿ, ಸಮೃದ್ಧಿ ಮತ್ತು ಸುರಕ್ಷತೆಗಾಗಿ ನಿಮ್ಮೊಂದಿಗೆ ನಿಕಟವಾಗಿ ಕೆಲಸ ಮಾಡುವುದಕ್ಕೆ ನಾನು ಎದುರು ನೋಡುತ್ತಿದ್ದೇನೆ ಎಂದು ಟ್ವೀಟ್ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ.

ADVERTISEMENT

ಅಲ್ಲದೆ, ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಕ್ಕಾಗಿ ಶ್ರೀಲಂಕಾದ ಜನರನ್ನು ನಾನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಯವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ರಾಜಪಕ್ಸ ಅವರು, ನಿಮ್ಮ ಪ್ರೀತಿಯ ಶುಭಾಶಯಗಳಿಗಾಗಿ ನಿಮಗೆ ಮತ್ತು ಭಾರತದ ಜನರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ನಮ್ಮ ಎರಡು ರಾಷ್ಟ್ರಗಳು ಇತಿಹಾಸ ಮತ್ತು ಸಮಾನ ನಂಬಿಕೆಗಳಿಂದ ಕೂಡಿವೆ. ನಮ್ಮ ಸ್ನೇಹವನ್ನು ಮತ್ತಷ್ಟು ಬಲಪಡಿಸಲು ಮತ್ತು ಮುಂದಿನ ದಿನಗಳಲ್ಲಿ ನಿಮ್ಮನ್ನು ಭೇಟಿಯಾಗಲು ನಾನು ಎದುರು ನೋಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಈ ವರ್ಷದ ಜೂನ್‌ನಲ್ಲಿ ನಡೆದ ಸರಣಿ ಭಯೋತ್ಪಾದನಾ ದಾಳಿಯಲ್ಲಿ ಸುಮಾರು 250 ಜನರು ಬಲಿಯಾದ ಬಳಿಕ ಶ್ರೀಲಂಕಾಗೆ ಭೇಟಿ ನೀಡಿದ ಮೊದಲ ವಿಶ್ವ ನಾಯಕ ಪ್ರಧಾನಿ ಮೋದಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.