ADVERTISEMENT

ಪ್ರಧಾನಿ ಮೋದಿಗೆ ಧರ್ಮಶಾಲಾದಲ್ಲಿ ಅದ್ಧೂರಿ ಸ್ವಾಗತ

​ಪ್ರಜಾವಾಣಿ ವಾರ್ತೆ
Published 16 ಜೂನ್ 2022, 11:11 IST
Last Updated 16 ಜೂನ್ 2022, 11:11 IST
ಪ್ರಧಾನಿ ನರೇಂದ್ರ ಮೋದಿ ಮತ್ತು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರು ಗುರುವಾರ ಧರ್ಮಶಾಲಾದಲ್ಲಿ ರೋಡ್ ಶೋನಲ್ಲಿ ಪಾಲ್ಗೊಂಡರು – ಪಿಟಿಐ ಚಿತ್ರ
ಪ್ರಧಾನಿ ನರೇಂದ್ರ ಮೋದಿ ಮತ್ತು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರು ಗುರುವಾರ ಧರ್ಮಶಾಲಾದಲ್ಲಿ ರೋಡ್ ಶೋನಲ್ಲಿ ಪಾಲ್ಗೊಂಡರು – ಪಿಟಿಐ ಚಿತ್ರ   

ಶಿಮ್ಲಾ:ಪ್ರಧಾನಿ ನರೇಂದ್ರ ಮೋದಿ ಅವರುಹಿಮಾಚಲಪ್ರದೇಶದ ಧರ್ಮಶಾಲಾಗೆ ಎರಡು ದಿನಗಳ ಭೇಟಿಗಾಗಿಗುರುವಾರ ಆಗಮಿಸಿದ್ದು, ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿಗಳಅಖಿಲ ಭಾರತ ಸಮಾವೇಶದ ಅಧ್ಯಕ್ಷತೆಯನ್ನು ಅವರು ವಹಿಸಲಿದ್ದಾರೆ.

ಗುರುವಾರ ಬೆಳಿಗ್ಗೆ ಧರ್ಮಶಾಲಾಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರು, ತೆರೆದ ಜೀಪಿನಲ್ಲಿರೋಡ್‌ ಶೋ ನಡೆಸಿದರು. ವಿವಿಧ ಸಾಂಸ್ಕೃತಿಕ ಕಲಾ ತಂಡಗಳಿಂದ ತಮ್ಮ ಸಾಂಪ್ರದಾಯಿಕ ವೇಷಭೂಷಣಗಳೊಂದಿಗೆ ಸಂಗೀತ ವಾದ್ಯಗಳನ್ನು ಪ್ರದರ್ಶಿಸಿ, ಮೋದಿ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು.

ಧರ್ಮಶಾಲಾ ಎಚ್‌ಪಿಸಿಎ ಸ್ಟೇಡಿಯಂನ ಒಳಾಂಗಣದ ವೇದಿಕೆಯಲ್ಲಿ ನೀತಿ ಆಯೋಗವು ಆಯೋಜಿಸಿರುವ ಮೂರು ದಿನಗಳಸಮಾವೇಶದ ಅಧ್ಯಕ್ಷತೆಯನ್ನು ಪ್ರಧಾನಿ ವಹಿಸಲಿದ್ದಾರೆ. ಕೇಂದ್ರ ವಸತಿ ಮತ್ತು ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಕೂಡ ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಬುಧವಾರ ಆರಂಭವಾದ ಈ ಸಮಾವೇಶಕ್ಕೆ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಬುಧವಾರ ಚಾಲನೆ ನೀಡಿದ್ದರು. ಸಮಾವೇಶ ಶುಕ್ರವಾರ ಸಮಾಪನವಾಗಲಿದೆ.

ಹೊಸ ಶಿಕ್ಷಣ ನೀತಿ-2020ರ ಅನುಷ್ಠಾನ, ನಗರ ಆಡಳಿತ, ಬೆಳೆ ವೈವಿಧ್ಯೀಕರಣ ಮತ್ತು ಕೃಷಿ ಸರಕುಗಳಲ್ಲಿ ಸ್ವಾವಲಂಬನೆ ವಿಷಯಗಳು ಸಮಾವೇಶದಲ್ಲಿ ಚರ್ಚಿಸಲಾಗುತ್ತಿದೆ.ಕೇಂದ್ರ ಮತ್ತು ರಾಜ್ಯಗಳ ಸಹಭಾಗಿತ್ವದಲ್ಲಿ ತ್ವರಿತ ಹಾಗೂ ಸುಸ್ಥಿರ ಆರ್ಥಿಕ ಬೆಳವಣಿಗೆಯತ್ತಲೂ ಗಮನ ಹರಿಸಲಾಗುವುದು ಎಂದು ಅವರು ತಿಳಿಸಿದರು.

ಸಮಾವೇಶದಲ್ಲಿರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಲ್ಲದೆ, ವಿವಿಧ ಕ್ಷೇತ್ರಗಳ ಸುಮಾರು 200 ಮಂದಿ ವಿಷಯ ತಜ್ಞರು ಪಾಲ್ಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.