ನರೇಂದ್ರ ಮೋದಿ
(ಪಿಟಿಐ ಚಿತ್ರ)
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ 26 ಮತ್ತು 27ರಂದು ಎರಡು ದಿನಗಳ ಗುಜರಾತ್ ಪ್ರವಾಸ ಕೈಗೊಳ್ಳಲಿದ್ದಾರೆ. ಇದೇ ವೇಳೆ ಅವರು ₹77,400 ಕೋಟಿಗೂ ಹೆಚ್ಚು ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಮೋದಿ ಅವರು ಸೋಮವಾರ ದಾಹೋದ್‌ನಲ್ಲಿ ಎಲ್ ಲೋಕೋಮೋಟಿವ್ ಉತ್ಪಾದನಾ ಘಟಕವನ್ನು ಉದ್ಘಾಟಿಸಲಿದ್ದಾರೆ. ಜತೆಗೆ, ಎಲೆಕ್ಟ್ರಿಕ್ ಲೋಕೋಮೋಟಿವ್‌ಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದಾದ ಬಳಿಕ ಭುಜ್‌ಗೆ ಪ್ರಯಾಣ ಬೆಳಸಲಿರುವ ಮೋದಿ, ₹53,400 ಕೋಟಿಗೂ ಹೆಚ್ಚು ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಜತೆಗೆ, ಎರಡು ಕಡೆ ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಮೋದಿ ಅವರು ಮಂಗಳವಾರ ಗುಜರಾತ್ ನಗರಾಭಿವೃದ್ಧಿ ಇಲಾಖೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಗಾಂಧಿನಗರದಲ್ಲಿ ‘ನಗರಾಭಿವೃದ್ಧಿ ವರ್ಷ 2025’ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ವೆರಾವಲ್ ಮತ್ತು ಅಹಮದಾಬಾದ್ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್, ವಲ್ಸಾದ್ ಮತ್ತು ದಾಹೋದ್ ನಿಲ್ದಾಣಗಳ ನಡುವಿನ ಎಕ್ಸ್‌ಪ್ರೆಸ್ ರೈಲಿಗೆ ಮೋದಿ ಚಾಲನೆ ನೀಡಲಿದ್ದಾರೆ.
ನಗರಾಭಿವೃದ್ಧಿ, ಆರೋಗ್ಯ ಮತ್ತು ನೀರು ಸರಬರಾಜಿಗೆ ಸಂಬಂಧಿಸಿದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.