ADVERTISEMENT

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ದೇಶದ ಮಗಳಿಗೆ ಸಲಾಂ: ಪ್ರಧಾನಿ ನರೇಂದ್ರ ಮೋದಿ

ಪಿಟಿಐ
Published 24 ಜನವರಿ 2021, 7:12 IST
Last Updated 24 ಜನವರಿ 2021, 7:12 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಹೆಣ್ಣು ಮಕ್ಕಳಿಗೆ ಶಿಕ್ಷಣ, ಉತ್ತಮ ಆರೋಗ್ಯ ಸೇವೆ ಮತ್ತು ಲಿಂಗ ಸಂವೇದನೆ ಸುಧಾರಣೆ ಸೇರಿದಂತೆ ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಿಳಿಸಿದರು.

ದೇಶದಾದ್ಯಂತ ಪ್ರತಿ ವರ್ಷ ಜನವರಿ 24 ಅನ್ನು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ ಅವರು,‘ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನಮ್ಮ #DeshKiBeti ಗೆ ಸಲ್ಯೂಟ್‌’ ಎಂದು ಅಭಿನಂದಿಸಿದ್ದಾರೆ.

ADVERTISEMENT

‘ಈ ಸಂದರ್ಭದಲ್ಲಿ ಹೆಣ್ಣು ಮಕ್ಕಳ ಸಬಲೀಕರಣ ಮತ್ತು ಅವರಿಗೆ ಉತ್ತಮ ಜೀವನ ನೀಡಲು ಶ್ರಮಿಸುತ್ತಿರುವ ಪ್ರತಿಯೊಬ್ಬರಿಗೆ ಗೌರವ ಸಲ್ಲಿಸೋಣ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.