ADVERTISEMENT

ರೈತರ ಮೇಲೆ ದಾಳಿ ನಡೆಸಿರುವ ಪ್ರಧಾನಿ ಮೋದಿಯಿಂದ ದೇಶ ದುರ್ಬಲ: ರಾಹುಲ್‌ ಗಾಂಧಿ

ಏಜೆನ್ಸೀಸ್
Published 25 ಜನವರಿ 2021, 8:52 IST
Last Updated 25 ಜನವರಿ 2021, 8:52 IST
ತಮಿಳುನಾಡಿನ ಸಾರ್ವಜನಿಕ ಸಭೆಯಲ್ಲಿ ರಾಹುಲ್‌ ಗಾಂಧಿ
ತಮಿಳುನಾಡಿನ ಸಾರ್ವಜನಿಕ ಸಭೆಯಲ್ಲಿ ರಾಹುಲ್‌ ಗಾಂಧಿ   

ಚೆನ್ನೈ: ರೈತರ ಮೇಲೆ ದಾಳಿ ನಡೆಸಿರುವ ಪ್ರಧಾನಿ ಮೋದಿ ದೇಶವನ್ನು ದುರ್ಬಲಗೊಳಿಸಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ತಮಿಳುನಾಡಿನ ಕರೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿರುವ ಅವರು, 'ಕಳೆದ ಆರು ವರ್ಷಗಳಲ್ಲಿ ಪ್ರಧಾನಿ ಮೋದಿ ಭಾರತವನ್ನು ದುರ್ಬಲಗೊಳಿಸಿದ್ದಾರೆ. ಬಿಜೆಪಿ-ಆರ್‌ಎಸ್‌ಎಸ್ ಸಿದ್ಧಾಂತವು ದೇಶದಾದ್ಯಂತ ದ್ವೇಷ ಹರಡುತ್ತಿರುವುದನ್ನು ನಾವು ನೋಡುತ್ತಿದ್ದೇವೆ' ಎಂದು ಹರಿಹಾಯ್ದಿದ್ದಾರೆ.

'ಕೇಂದ್ರ ಸರ್ಕಾರವು ನಮ್ಮ ಆರ್ಥಿಕತೆಯನ್ನು ನಾಶಮಾಡಿದೆ. ನಮ್ಮ ಯುವಕರಿಗೆ ಕೆಲಸ ಸಿಗುತ್ತಿಲ್ಲ. ಇದು ನಮ್ಮ ಯುವಕರ ತಪ್ಪಲ್ಲ. ಪ್ರಧಾನಿ ಮೋದಿ ತೆಗೆದುಕೊಂಡ ತಪ್ಪು ನಿರ್ಧಾರಗಳಿಂದ ಈ ಸನ್ನಿವೇಶ ನಿರ್ಮಾಣವಾಗಿದೆ' ಎಂದು ರಾಹುಲ್‌ ಹೇಳಿದ್ದಾರೆ.

ADVERTISEMENT

'ನಮ್ಮ ರೈತರ ಮೇಲೆ ಪ್ರಧಾನಿ ಮೋದಿ ದಾಳಿ ನಡೆಸಿದ್ದಾರೆ. ಭಾರತದ ಕೃಷಿ ಕ್ಷೇತ್ರವನ್ನು ದೊಡ್ಡ ಕೈಗಾರಿಕೋದ್ಯಮಿಗಳಿಗೆ ಹಸ್ತಾಂತರಿಸುವ ಸಲುವಾಗಿ ಮೂರು ಹೊಸ ಕಾಯ್ದೆಗಳನ್ನು ತಂದಿದ್ದಾರೆ. ರೈತರು ತಮ್ಮನ್ನು ರಕ್ಷಿಸಿಕೊಳ್ಳುವುದಕ್ಕೊಸ್ಕರ ನ್ಯಾಯಾಲಯಕ್ಕೆ ಹೋಗಲು ಸಾಧ್ಯವಿಲ್ಲ ಎಂಬುದಾಗಿ ಹೊಸ ಕಾಯ್ದೆಗಳು ಸ್ಪಷ್ಟವಾಗಿ ಹೇಳುತ್ತವೆ' ಎಂದು ಅವರು ತಿಳಿಸಿದ್ದಾರೆ.

ಭಾರತದ ಅಡಿಪಾಯ ನಾಶವಾಗುವುದಕ್ಕೆ ತಮ್ಮ ಪಕ್ಷ ಅವಕಾಶ ನೀಡುವುದಿಲ್ಲ ಎಂದಿರುವ ರಾಹುಲ್‌, 'ತಮಿಳುನಾಡಿನ ಚೈತನ್ಯ, ಭಾಷೆ, ಸಂಸ್ಕೃತಿ ಮತ್ತು ಇತಿಹಾಸ ಪ್ರಧಾನಿ ಮೋದಿಗೆ ಅರ್ಥವಾಗುತ್ತಿಲ್ಲ' ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.