ಭಾರತದ ಮೊದಲ ನೀರೊಳಗಿನ ಮೆಟ್ರೊಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.
(ಪಿಟಿಐ ಚಿತ್ರ)
ಪಶ್ಚಿಮ ಬಂಗಾಳದ ಹೂಗ್ಲಿ ನದಿಯ ಅಡಿಯಲ್ಲಿ ಭಾರತದ ಮೊದಲ ನೀರೊಳಗಿನ ಸುರಂಗ ಮಾರ್ಗವನ್ನು ನಿರ್ಮಿಸಲಾಗಿದೆ.
ಪೂರ್ವ ಪಶ್ಚಿಮ ಮೆಟ್ರೊ ಕಾರಿಡಾರ್‌ನ ಭಾಗವಾಗಿ ಮೆಟ್ರೊ ನಿರ್ಮಿಸಲಾಗಿದೆ.
ನೀರೊಳಗಿನ 520 ಮೀಟರ್ ಉದ್ಧದ ಈ ಮಾರ್ಗವನ್ನು 45 ಸೆಕೆಂಡುಗಳಲ್ಲಿ ಮೆಟ್ರೊ ರೈಲು ದಾಟಿ ಹೋಗಲಿದೆ.
ಈ ಸುರಂಗ ಮಾರ್ಗವು ನದಿಪಾತ್ರದಿಂದ 13 ಮೀಟರ್ ಕೆಳಗೆ ಮತ್ತು ನೆಲದ ಮಟ್ಟದಿಂದ 33 ಮೀಟರ್ ಕೆಳಗೆ ನಿರ್ಮಾಣವಾಗಿದೆ.
ಕೋಲ್ಕತ್ತದ ಪೂರ್ವದಲ್ಲಿ ಸಾಲ್ಟ್ ಲೇಕ್ ಸೆಕ್ಟರ್ ವಿನ ಐಟಿ ತಾಣದಿಂದ ಪಶ್ಚಿಮದಲ್ಲಿ ಹೌರಾ ಮೈದಾನದವರೆಗೆ 520 ಮೀಟರ್ ಉದ್ದದ ಸುರಂಗವು ನದಿಗೆ ಅಡ್ಡಲಾಗಿ ಹಾದುಹೋಗಿದೆ.
ಹೌರಾ ಮತ್ತು ಸೀಲ್ದಾ ನಡುವಿನ ಈ ಮೆಟ್ರೊ ಮಾರ್ಗವು ರಸ್ತೆಯ ಮೂಲಕ ಸಂಚರಿಸಬೇಕಿದ್ದ ಒಂದೂವರೆ ಗಂಟೆಗಳ ಪ್ರಯಾಣದ ಸಮಯವನ್ನು 40 ನಿಮಿಷಗಳಿಗೆ ಇಳಿಸಿದೆ.
ಮೆಟ್ರೊ ರೈಲಿನಲ್ಲಿ ಸಂಚರಿಸಿದ ಪ್ರಧಾನಿ ಮೋದಿ
ಭಾರತದ ಮೊದಲ ನೀರೊಳಗಿನ ಮೆಟ್ರೊಗೆ ಚಾಲನೆ
ಮಕ್ಕಳೊಂದಿಗೆ ಮೆಟ್ರೊದಲ್ಲಿ ಸಂಚರಿಸಿದ ಪ್ರಧಾನಿ ಮೋದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.