ADVERTISEMENT

ಜಮ್ಮು: ₹32 ಸಾವಿರ ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಫೆಬ್ರುವರಿ 2024, 7:15 IST
Last Updated 20 ಫೆಬ್ರುವರಿ 2024, 7:15 IST
<div class="paragraphs"><p> ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಅವರು ಚಾಲನೆ ನೀಡಿದರು</p></div>

ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಅವರು ಚಾಲನೆ ನೀಡಿದರು

   

ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ₹32 ಸಾವಿರ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.

ಜಮ್ಮುವಿನ ಮೌಲಾನಾ ಆಜಾದ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾದ ಮೋದಿ ಅವರನ್ನು ಜಮ್ಮು ಮತ್ತು ಕಾಶ್ಮೀರ ಲೆಪ್ಟಿನೆಂಟ್‌ ಗವರ್ನರ್‌ ಮನೋಜ್ ಸಿನ್ಹಾ ಅವರು ಸನ್ಮಾನಿಸಿದರು. 

ADVERTISEMENT

ಆರೋಗ್ಯ, ಶಿಕ್ಷಣ, ರೈಲು, ರಸ್ತೆ, ವಿಮಾನಯಾನ, ಪೆಟ್ರೋಲಿಯಂ, ನಾಗರಿಕ ಮೂಲಸೌಕರ್ಯ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ಯೋಜನೆಗಳಿಗೆ ಮೋದಿ ಅವರು ಚಾಲನೆ ನೀಡಿದ್ದಾರೆ.

ಇದೇ ವೇಳೆ ಕಣಿವೆ ರಾಜ್ಯದಲ್ಲಿ ಮೊದಲ ಎಲೆಕ್ಟ್ರಿಕ್ ರೈಲು ಸಂಚಾರಕ್ಕೆ ಮತ್ತು ಸಂಗಲದಾನ್‌ –ಬಾರಾಮುಲ್ಲಾ ನಿಲ್ದಾಣದ ನಡುವಿನ ರೈಲು ಸೇವೆಗೆ ಹಸಿರು ನಿಶಾನೆ ತೋರಿದರು.

ಕಾರ್ಯಕ್ರಮದಲ್ಲಿ, ಸರ್ಕಾರಿ ಸೇವೆಗೆ ನೇಮಕಾತಿಯಾದ ಸುಮಾರು 1,500 ಅಭ್ಯರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇಮಕಾತಿ ಆದೇಶ ವಿತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.