ADVERTISEMENT

ದೆಹಲಿಯಲ್ಲಿ ನೂತನ ರಕ್ಷಣಾ ಕಚೇರಿ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಸೆಪ್ಟೆಂಬರ್ 2021, 6:43 IST
Last Updated 16 ಸೆಪ್ಟೆಂಬರ್ 2021, 6:43 IST
ಚಿತ್ರ ಕೃಪೆ: Twitter/@pibindia
ಚಿತ್ರ ಕೃಪೆ: Twitter/@pibindia   

ನವದೆಹಲಿ: ದೆಹಲಿಯ ಕಸ್ತೂರಬಾ ಗಾಂಧಿ ಮಾರ್ಗ ಮತ್ತು ಆಫ್ರಿಕಾ ಅವೆನ್ಯೂನಲ್ಲಿ ಪ್ರಧಾನಿ ನರೇಂದ್ರ ಮೋದಿ, ಗುರುವಾರ ನೂತನ ರಕ್ಷಣಾ ಕಚೇರಿಗಳ ಸಂಕೀರ್ಣಗಳನ್ನು ಉದ್ಘಾಟಿಸಿದ್ದಾರೆ.

ಹೊಸ ರಕ್ಷಣಾ ಕಚೇರಿಗಳು ಸೇನೆ, ನೌಕಾಪಡೆ ಮತ್ತು ವಾಯುಪಡೆ ಸೇರಿದಂತೆ ರಕ್ಷಣಾ ಸಚಿವಾಲಯ ಮತ್ತು ಸಶಸ್ತ್ರ ಪಡೆಯ ಸುಮಾರು 7,000 ಅಧಿಕಾರಿಗಳಿಗೆ ಸ್ಥಳಾವಕಾಶ ಕಲ್ಪಿಸಲಿವೆ.

ರಕ್ಷಣಾ ಕಚೇರಿಗಳಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಬಳಿಕ ಸೇನೆ, ನೌಕಾಪಡೆ, ವಾಯುಪಡೆ ಮತ್ತು ನಾಗರಿಕ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ್ದಾರೆ.

ಉದ್ಘಾಟನಾ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಸಶಸ್ತ್ರ ಪಡೆಗಳ ಮುಖ್ಯಸ್ಥರು ಭಾಗಿಯಾಗಿದ್ದಾರೆ.

ನೂತನ ಕಟ್ಟಡಗಳು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.