ADVERTISEMENT

ಚಿತ್ರಗಳಲ್ಲಿ: ವಿಶ್ವದ ಅತಿ ದೊಡ್ಡ ಕೋವಿಡ್-19 ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆ

ವಿಶ್ವದ ಅತಿ ದೊಡ್ಡ ಕೋವಿಡ್-19 ಲಸಿಕೆ ವಿತರಣೆ ಅಭಿಯಾನಕ್ಕೆ ಜ. 16 ಶನಿವಾರದಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಮೊದಲ ಹಂತದಲ್ಲಿ ಮೂರು ಕೋಟಿ ಜನರಿಗೆ ಲಸಿಕೆ ವಿತರಿಸುವ ಗುರಿ ಹೊಂದಲಾಗಿದೆ. ಆಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ಯುನಿವರ್ಸಿಟಿ ಜಂಟಿಯಾಗಿ ಅಭಿವೃದ್ಧಿಪಡಿಸಿದ ಪುಣೆಯ ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿರುವ 'ಕೋವಿಶೀಲ್ಡ್' ಮತ್ತು ಹೈದರಾಬಾದ್‌ನ ಭಾರತ್ ಬಯೋಟೆಕ್ ತಯಾರಿಸಿರುವ 'ಕೋವ್ಯಾಕ್ಸಿನ್' ಲಸಿಕೆಗಳಿಗೆ ಅನುಮೋದನೆ ನೀಡಲಾಗಿದೆ. ಚಿತ್ರ ಕೃಪೆ (ಎಎಫ್‌ಪಿ, ಪಿಟಿಐ)

​ಪ್ರಜಾವಾಣಿ ವಾರ್ತೆ
Published 16 ಜನವರಿ 2021, 10:49 IST
Last Updated 16 ಜನವರಿ 2021, 10:49 IST
 ಪ್ರಖ್ಯಾತ ಮರಳು ಶಿಲ್ಪಿ ಸುದರ್ಶನ್‌ ಪಟ್ನಾಯಕ್ ರಚಿಸಿದ ಕಲಾಕೃತಿ
ಪ್ರಖ್ಯಾತ ಮರಳು ಶಿಲ್ಪಿ ಸುದರ್ಶನ್‌ ಪಟ್ನಾಯಕ್ ರಚಿಸಿದ ಕಲಾಕೃತಿ   
ವಿಡಿಯೊ ಕಾನ್ಫೆರನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ
ಮುಂಬೈನಲ್ಲಿ ಗೆಲುವಿನ ಸಂಕೇತ ನೀಡುತ್ತಿರುವ ವೈದ್ಯರು
ಕೋವಿಶೀಲ್ಡ್ ಲಸಿಕೆ ಪ್ರದರ್ಶಿಸುತ್ತಿರುವ ಆರೋಗ್ಯ ಕಾರ್ಯಕರ್ತೆ
ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಮುಂಚೂಣಿಯ ಸೇನಾನಿಗಳು
ದೇಶಕ್ಕೆ ಹೆಮ್ಮೆ: ಲಸಿಕೆ ನೀಡುತ್ತಿರುವ ಕ್ಷಣ
ಸೆಲ್ಫಿ ಕ್ಲಿಕ್ಕಿಸುತ್ತಿರುವ ಆರೋಗ್ಯ ಕಾರ್ಯಕರ್ತೆಯರು
ದೆಹಲಿ ಏಮ್ಸ್‌ನಲ್ಲಿ ಲಸಿಕೆ ವಿತರಣೆ ಅಭಿಯಾನ ಉದ್ಘಾಟಿಸಿದ ಆರೋಗ್ಯ ಸಚಿವ ಡಾ. ಹರ್ಷವರ್ಧನ್
ಕೋವಿಡ್-19 ಲಸಿಕೆ ಪಡೆದ ಬಳಿಕ ಗೆಲುವಿನ ಸಂಕೇತ ತೋರಿಸುತ್ತಿರುವ ಆರೋಗ್ಯ ಸೇನಾನಿ
ವಿಶ್ವದಲ್ಲೇ ಅತಿ ದೊಡ್ಡ ಕೋವಿಡ್-19 ಲಸಿಕೆ ಹಂಚಿಕೆ ಅಭಿಯಾನಕ್ಕೆ ಚಾಲನೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.