ADVERTISEMENT

ವಾರಾಣಸಿಯಲ್ಲಿ ಪ್ರಧಾನಿ ಮೋದಿ: ₹2,095 ಕೋಟಿ ವೆಚ್ಚದ ಯೋಜನೆಗಳಿಗೆ ಚಾಲನೆ

ಪಿಟಿಐ
Published 23 ಡಿಸೆಂಬರ್ 2021, 10:09 IST
Last Updated 23 ಡಿಸೆಂಬರ್ 2021, 10:09 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಯಲ್ಲಿ ₹2,095 ಕೋಟಿ ವೆಚ್ಚದ 27 ಯೋಜನೆಗಳಿಗೆ ಗುರುವಾರ ಶಂಕು ಸ್ಥಾಪನೆ ನೆರವೇರಿಸಿದರು.

ಕಳೆದ 10 ದಿನಗಳಲ್ಲಿ ಎರಡನೇ ಬಾರಿಗೆ ಪ್ರಧಾನಿ ವಾರಾಣಸಿಗೆ ಭೇಟಿ ನೀಡಿದ್ದಾರೆ. ಡಿಸೆಂಬರ್‌ 13ರಂದು ಅವರು ಕಾಶಿ ವಿಶ್ವನಾಥ ಕಾರಿಡಾರ್‌ ಉದ್ಫಾಟಿಸಿದ್ದರು.

ಕರ್ಖಿಯಾಂವದಲ್ಲಿರುವ ಉತ್ತರ ಪ್ರದೇಶ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರದ ಫುಡ್‌ ಪಾರ್ಕ್‌ನಲ್ಲಿ 'ಬನಸ್‌ ಡೈರಿ ಸಂಕುಲ್‌'ಗೆ ಪ್ರಧಾನಿ ಶಿಲಾನ್ಯಾಸ ನೆರವೇರಿಸಿದರು.

ADVERTISEMENT

ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, 'ಭಾರತದಲ್ಲಿ ಹಾಲು ಉತ್ಪಾದನೆಯು ಕಳೆದ 6–7 ವರ್ಷಗಳಿಗೆ ಹೋಲಿಸಿದರೆ, ಈಗ ಶೇಕಡ 45ರಷ್ಟು ಹೆಚ್ಚಳವಾಗಿದೆ. ಪ್ರಸ್ತುತ ಜಗತ್ತಿನ ಒಟ್ಟು ಹಾಲು ಉತ್ಪಾದನೆಯ ಪೈಕಿ ಭಾರತದಲ್ಲಿ ಶೇಕಡ 22ರಷ್ಟು ಉತ್ಪಾದನೆಯಾಗುತ್ತಿದೆ. ದೇಶದಲ್ಲಿಯೇ ಉತ್ತರ ಪ್ರದೇಶವು ಅತಿ ಹೆಚ್ಚು ಹಾಲು ಉತ್ಪಾದಿಸುವ ರಾಜ್ಯವಾಗಿದೆ ಹಾಗೂ ಡೈರಿ ವಲಯವನ್ನು ವಿಸ್ತರಿಸಿಕೊಳ್ಳುತ್ತಿರುವುದು ಸಂತಸದ ವಿಚಾರವಾಗಿದೆ' ಎಂದರು.

'ಹಸುಗಳು ಮತ್ತು ಎಮ್ಮೆಗಳ ಕುರಿತು ಹಾಸ್ಯ ಮಾಡುತ್ತಿರುವವರು, ಕೋಟ್ಯಂತರ ಜನರು ಜೀವನ ನಿರ್ವಹಣೆಗೆ ಅವುಗಳ ಮೇಲೆ ಅವಲಂಬಿಸಿರುವುದನ್ನು ಮರೆತಿದ್ದಾರೆ' ಎಂದು ಪ್ರಧಾನಿ ಮೋದಿ ಹೇಳಿದರು.

ಶಿಕ್ಷಣ ಮತ್ತು ಆರೋಗ್ಯ ವಲಯಕ್ಕೆ ಸಂಬಂಧಿಸಿದ ಹಲವು ಯೋಜನೆಗಳಿಗೂ ಅವರು ಚಾಲನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.